
ಲಕ್ನೋ: ತಮ್ಮ ಪತಿ ರಾಜು ಪಾಲ್ ಹತ್ಯೆ ಅಪರಾಧಿಗಳಿಗೆ ನ್ಯಾಯ ಒದಗಿಸಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ ಕೆಲವೇ ಗಂಟೆಗಳ ನಂತರ ಅಖಿಲೇಶ್ ಯಾದವ್ ಶಾಸಕಿ ಪೂಜಾ ಪಾಲ್ ಅವರನ್ನು ಸಮಾಜವಾದಿ ಪಕ್ಷದಿಂದ ಹೊರಹಾಕಿದ್ದಾರೆ.
ಪೂಜಾ ಪಾಲ್ ಹಿಂದೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ, ಈ ಸಂಬಂಧ ಮಾಹಿತಿ ನೀಡಿದ್ದರೂ ಅವರನ್ನು ಹೊರಹಾಕಲಿಲ್ಲ, ಇದು ಪಕ್ಷಕ್ಕೆ ದೊಡ್ಡ ಹಾನಿಯನ್ನುಂಟುಮಾಡಿತು, ಹೀಗಾಗಿ ಪೂಜಾ ಪಾಲ್ ಅವರನ್ನು ಹೊರಹಾಕಲಾಗಿದೆ ಎಂದು ಹೇಳಿದರು. ಪೂಜಾ ಪಾಲ್ ಉಚ್ಛಾಟನೆಗೆ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅಧಿಕೃತವಾಗಿ ಸಹಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ಅವರನ್ನು ಪೂಜಾ ಪಾಲ್ ವಿಧಾನಸಭೆ ಅಧಿವೇಶನದಲ್ಲಿ ಹೊಗಳಿದ್ದರು, ಅತಿಕ್ ಅಹ್ಮದ್‌ನಂತಹ ಅಪರಾಧಿಗಳನ್ನು ನಿರ್ಮೂಲನೆ ಮಾಡುವ ಮೂಲಕ ನನ್ನಂತ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ.
ನನ್ನ ಗಂಡನನ್ನು ಕೊಂದವರು ಯಾರು ಎಂದು ಎಲ್ಲರಿಗೂ ತಿಳಿದಿದೆ. ಬೇರೆ ಯಾರೂ ನನಗೆ ಸಹಾಯ ಮಾಡದಿದ್ದಾಗ ಮುಖ್ಯಮಂತ್ರಿ ನನಗೆ ನ್ಯಾಯ ನೀಡಿದ್ದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಶೂನ್ಯ ಸಹಿಷ್ಣುತೆಯಂತಹ ನೀತಿಗಳ ಮೂಲಕ ಪ್ರಯಾಗ್‌ರಾಜ್‌ನಲ್ಲಿ ಅನೇಕ ಮಹಿಳೆಯರಿಗೆ ಮುಖ್ಯಮಂತ್ರಿ ನ್ಯಾಯ ನೀಡಿದ್ದಾರೆ, ಇದು ಅತಿಕ್ ಅಹ್ಮದ್‌ನಂತಹ ಅಪರಾಧಿಗಳನ್ನು ನಿರ್ಮೂಲನೆ ಮಾಡಲು ಕಾರಣವಾಯಿತು” ಎಂದು ಅವರು ಹೇಳಿದರು.
Advertisement