ನವದೆಹಲಿ: ಪಾರ್ಟಿಯಲ್ಲಿ ಡ್ರಗ್ಸ್ ಬೆರೆಸಿದ ಮದ್ಯ ನೀಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪಾರ್ಟಿಯಲ್ಲಿ 24 ವರ್ಷದ ಮಹಿಳೆಯೊಬ್ಬರಿಗೆ ಮಾದಕ ದ್ರವ್ಯ ಸೇವಿಸುವಂತೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ.

ಪಂಜಾಬಿ ಬಾಗ್ ನಿವಾಸಿಯಾಗಿರುವ ಸಂತ್ರಸ್ತೆ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ತನ್ನ ಸ್ನೇಹಿತೆ ಮತ್ತೊಬ್ಬ ಸ್ನೇಹಿತನ ಮನೆಯಲ್ಲಿ ನಡೆಯುವ ಪಾರ್ಟಿಗೆ ಆಹ್ವಾನಿಸಿದ್ದರು ಎಂದು ಆರೋಪಿಸಿದ್ದಾರೆ.

ದೂರಿನ ಪ್ರಕಾರ, ಗುಂಪು ತಡರಾತ್ರಿಯವರೆಗೆ ಮದ್ಯ ಸೇವಿಸಿತ್ತು. ನಂತರ ಮಹಿಳೆಗೆ ಮಾದಕ ದ್ರವ್ಯ ಬೆರೆಸಿದ ಮದ್ಯವನ್ನು ನೀಡಲಾಗಿದ್ದು, ಆಕೆ ಅರೆ ಪ್ರಜ್ಞಾಹೀನಳಾಗಿದ್ದಾಳೆ. ಬಳಿಕ ಅತ್ಯಾಚಾರ ಎಸಗಲಾಗಿದೆ.

Representational image
ಉತ್ತರ ಪ್ರದೇಶ: ಮಾನಸಿಕ ಅಸ್ವಸ್ಥೆ, ಕಿವುಡ-ಮೂಕ ಮಹಿಳೆ ಮೇಲೆ ಗ್ಯಾಂಗ್ ರೇಪ್; ಇಬ್ಬರ ಬಂಧನ

ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದು, ಈ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ.

ಪೊಲೀಸರು ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡು, ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com