
ನವದೆಹಲಿ: ದೇಶದಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಈ ದಿನವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ಇನ್ನಷ್ಟು ಶ್ರಮಿಸಲು ನಮಗೆ ಸ್ಫೂರ್ತಿ ನೀಡಲಿ. ಜೈ ಹಿಂದ್ ಎಂದು ಹೇಳಿದ್ದಾರೆ.
ಈ ನಡುವೆ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸತತ 12ನೇ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಲಿದ್ದಾರೆ.
ದೆಹಲಿಯ ಕೆಂಪು ಕೋಟೆಯಿಂದ ಪ್ರಧಾನಿ ಮೋದಿ ಅವರು ಭಾರತೀಯ ಧ್ವಜವನ್ನು ಹಾರಿಸಿ, ದೇಶವನ್ನುದ್ದೇಶಿಸಿ ತಮ್ಮ ಸಾಂಪ್ರದಾಯಿಕ ಭಾಷಣವನ್ನು ಮಾಡಲಿದ್ದಾರೆ.
Advertisement