79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
PM Modi hoists national flag at red fort
ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
Updated on

ನವದೆಹಲಿ: ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಮೋದಿ ನಮನ ಸಲ್ಲಿಸಿದರು.

ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು.

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

PM Modi hoists national flag at red fort
79ನೇ ಸ್ವಾತಂತ್ರ್ಯೋತ್ಸವ: ವರ್ಣರಂಜಿತ ಕೇಸರಿ ರುಮಾಲು ಧರಿಸಿ ಎಲ್ಲರ ಗಮನ ಸೆಳೆದ ಪ್ರಧಾನಿ ಮೋದಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com