ದೇಶದಾದ್ಯಂತ 79ನೇ ಸ್ವಾತಂತ್ರ್ಯ ದಿನ ಸಂಭ್ರಮ: ಕೆಂಪುಕೋಟೆಯಲ್ಲಿ ಭದ್ರತೆ ಹೆಚ್ಚಳ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು

ಪ್ರಧಾನಿ ಮೋದಿ ಅವರು ನವದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ರಾಷ್ಟ್ರವನ್ನುದ್ದೇಶಿಸಿ ವಾರ್ಷಿಕ ಭಾಷಣ ಮಾಡಲಿದ್ದಾರೆ.
File photo
ಸಂಗ್ರಹ ಚಿತ್ರ
Updated on

ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಸಜ್ಜುಗೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಬಹುಮಹಡಿ ಕಟ್ಟಡಗಳಲ್ಲಿ ಸ್ನೈಪರ್‌ಗಳು, ನಗರದಾದ್ಯಂತ ಹೆಚ್ಚಿನ ಕ್ಯಾಮೆರಾ ಕಣ್ಗಾವಲು ಮತ್ತು ಕೆಂಪು ಕೋಟೆ ಸುತ್ತಮುತ್ತಲಿನ ಭದ್ರತೆಗಾಗಿ 11,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಜೊತೆಗೆ 3,000 ಸಂಚಾರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಪ್ರಧಾನಿ ಮೋದಿ ಅವರು ನವದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ರಾಷ್ಟ್ರವನ್ನುದ್ದೇಶಿಸಿ ವಾರ್ಷಿಕ ಭಾಷಣ ಮಾಡಲಿದ್ದಾರೆ.

2014 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿ ಅವರ ಸತತ 12ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಇದಾಗಿದೆ. ಕಾರ್ಯಕ್ರಮವು ಬೆಳಗ್ಗೆ 7:30 ಕ್ಕೆ ಗಣ್ಯರಿಂದ ಅಧಿಕೃತ ಶುಭಾಶಯಗಳು, ರಾಷ್ಟ್ರಗೀತೆ ಮತ್ತು 21-ಗನ್ ಸೆಲ್ಯೂಟ್ ನೊಂದಿಗೆ ಪ್ರಾರಂಭವಾಗಲಿದೆ. ಬಳಿಕ ಪ್ರಧಾನ ಮಂತ್ರಿಗಳು ಕೆಂಪು ಕೋಟೆಯಿಂದ ತಮ್ಮ ಭಾಷಣ ಮಾಡಲಿದ್ದಾರೆ.

ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾ, ಡ್ರೋನ್‌ ಕಣ್ಗಾವಲು, ಮುಖ ಚಹರೆ ಪತ್ತೆ ಕ್ಯಾಮೆರಾಗಳು ಮತ್ತು ಸ್ವಯಂಚಾಲಿತ ನಂಬರ್‌ ಪ್ಲೇಟ್‌ ಪತ್ತೆ ಮಾಡುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಐದು ಪಾರ್ಕಿಂಗ್‌ ತಾಣಗಳಲ್ಲಿ ವಾಹನ ನಿಗಾ ವವಸ್ಥೆಯನ್ನು (UVSS) ಇದೇ ಮೊದಲ ಬಾರಿಗೆ ಅಳವಡಿಸಲಾಗಿದೆ. ಇದರ ಮೂಲಕ ವಾಹನಗಳಲ್ಲಿ ಇಟ್ಟಿರಬಹುದಾದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಬಹುದಾಗಿದೆ.

File photo
ಸ್ವಾತಂತ್ರ್ಯ ದಿನಾಚರಣೆ ವಾರಾಂತ್ಯ: ವಿಮಾನ ನಿಲ್ದಾಣದಲ್ಲಿ ತೀವ್ರ ಭದ್ರತಾ ತಪಾಸಣೆಯಿಂದ ವಿಳಂಬ ಸಾಧ್ಯತೆ; BIAL ಮಾಹಿತಿ

ಆಹ್ವಾನ ಪತ್ರಿಕೆ ಇರುವವರಿಗೆ ಮಾತ್ರ ಆ. 15ರಂದು ಕೆಂಪು ಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿದೆ. ಜನರ ನಡುವೆ ಏನಾದರೂ ಅನುಮಾನಾಸ್ಪದ ಘಟನೆಗಳು ನಡೆಯುತ್ತಿದ್ದರೆ ಅದನ್ನು ಪತ್ತೆ ಮಾಡಲು ಹೆಡ್‌ಕೌಂಟ್‌ ಕ್ಯಾಮೆರಾಗಳನ್ನೂ ಬಳಸಿಕೊಳ್ಳಲಾಗುತ್ತಿದೆ.

ಇದಲ್ಲದೆ, ಇವೆಲ್ಲವುಗಳ ನಡುವೆ ಸಮಾಜಿಕ ಮಾಧ್ಯಮಗಳ ಮೇಲೂ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದು, ಯಾವುದೇ ರೀತಿಯ ಆನ್‌ಲೈನ್‌ ಬೆದರಿಕೆಗಳು, ಸುಳ್ಳು ಮಾಹಿತಿ ಹರಡಿ ಶಾಂತಿ ಭಂಗ ಉಂಟುಮಾಡುವವರ ಮೇಲೆ ಸೈಬರ್ ಪೊಲೀಸರು ನಿಗಾ ವಹಿಸಲಿದ್ದಾರೆ.

ಇವುಗಳೊಂದಿಗೆ ಸಮಾಜ ಘಾತುಕ ಶಕ್ತಿಗಳು ಅಥವಾ ಭಯೋತ್ಪಾದಕರ ಯಾವುದೇ ಕೃತ್ಯಗಳನ್ನು ತಡೆಯಲು ಪ್ಯಾರಾಗ್ಲೈಡರ್‌, ಹ್ಯಾಂಗ್ ಗ್ಲೈಡರ್‌, ಮಾನವ ರಹಿತ ವಿಮಾನ, ಡ್ರೋನ್‌, ಬಿಸಿ ಗಾಳಿ ಬಲೂನುಗಳು ಆ.16ರವರೆಗೂ ದೆಹಲಿಯ ಮೇಲೆ ನಿಗಾ ಇಡಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com