Vice-President Polls: ಬಿಜೆಪಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಬಗೆಗಿನ 10 ಸಂಗತಿಗಳು!

ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು ಕಳೆದ ವರ್ಷದ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
CP Radhakrishnan
ಸಿಪಿ ರಾಧಾಕೃಷ್ಣನ್
Updated on

ನವದೆಹಲಿ: ಇದೇ ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದ ಅಭ್ಯರ್ಥಿಯಾಗಿ ಭಾರತೀಯ ಜನತಾ ಪಕ್ಷ ಭಾನುವಾರ ಘೋಷಿಸಿದೆ. ಸಿಪಿ ರಾಧಾಕೃಷ್ಣನ್ ಬಗ್ಗೆ 10 ಸಂಗತಿಗಳು ಇಲ್ಲಿವೆ:

  • ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು ಕಳೆದ ವರ್ಷದ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

  • 68 ವರ್ಷ ವಯಸ್ಸಿನ ರಾಧಾಕೃಷ್ಣನ್ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್‌ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. 2024 ರ ಮಾರ್ಚ್ ಮತ್ತು ಜುಲೈ ನಡುವೆ ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.

  • 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದರು.

  • ಹಿರಿಯ ಬಿಜೆಪಿ ನಾಯಕ ಆಗಿರುವ ರಾಧಾಕೃಷ್ಣನ್ ಅವರು ಕೊಯಮತ್ತೂರಿನಿಂದ ಲೋಕಸಭೆಗೆ ಎರಡು ಬಾರಿ ಚುನಾಯಿತರಾಗಿದ್ದರು. ಅಲ್ಲದೇ ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

  • 2004 ಮತ್ತು 2007 ರ ನಡುವೆ ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ 93 ದಿನಗಳ ಕಾಲ 19,000 ಕಿಮೀ 'ರಥ ಯಾತ್ರೆ' ಕೈಗೊಂಡಿದ್ದರು. ಎಲ್ಲಾ ಭಾರತೀಯ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆ ತೊಡೆದುಹಾಕಲು ಮತ್ತು ಮಾದಕ ದ್ರವ್ಯಗಳ ಬೆದರಿಕೆ ಮತ್ತಿತ್ತರ ಬೇಡಿಕೆಗಳನ್ನಿಟ್ಟುಕೊಂಡು ಯಾತ್ರೆ ನಡೆಸಿದ್ದರು. ಬೇರೆ ಬೇರೆ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ನಡೆಸಿದ್ದರು.

  • ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ.

  • 1957 ರಲ್ಲಿ ತಮಿಳುನಾಡಿನ ತಿರುಪ್ಪೂರ್‌ನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಲ್ಲಿ ಬಿಬಿಎ ಪದವಿಯೊಂದಿಗೆ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ್ದಾರೆ.

  • ಉತ್ಸಾಹಿ ಕ್ರೀಡಾಪಟು ಆಗಿರುವ ರಾಧಾಕೃಷ್ಣನ್ ಅವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಮತ್ತು ದೂರದ ಓಟಗಾರರಾಗಿದ್ದರು. ಕ್ರಿಕೆಟ್ ಮತ್ತು ವಾಲಿಬಾಲ್ ಕೂಡಾ ಆಡಿದ್ದಾರೆ.

  • ಜುಲೈ 21 ರಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನದಲ್ಲಿ ಅನಾರೋಗ್ಯದ ಕಾರಣ ನೀಡಿ ಜಗದೀಪ್ ಧಂಖರ್ ರಾಜೀನಾಮೆ ನೀಡಿದ ನಂತರ ಉಪಾಧ್ಯಕ್ಷ ಸ್ಥಾನವು ತೆರವಾಗಿತ್ತು.

  • ಉಪರಾಷ್ಟ್ರಪತಿ ಚುನಾವಣೆಗೆ ಸೆಪ್ಟೆಂಬರ್ 9 ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಈ ಹಿಂದೆ ಘೋಷಿಸಿತ್ತು.

CP Radhakrishnan
Vice-President Polls: ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣ NDA ಅಭ್ಯರ್ಥಿ; JP Nadda ಘೋಷಣೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com