
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ದೂರವಾಣಿ ಕರೆ ಮಾಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಜೊತೆ ನಡೆದ ಅಲಸ್ಕಾ (Alaska Summit) ಮಾತುಕತೆ ಕುರಿತ ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಈಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅಲಾಸ್ಕದಲ್ಲಿ ನಡೆಸಿದ ಸಭೆಯ ವಿವರಗಳನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿದ್ದು, ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಭಾರತ ಹಿಂದಿನಿಂದಲೂ ಹೇಳುತ್ತಲೇ ಇದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಗೂ ನಮ್ಮ ಬೆಂಬಲ ಇರಲಿದೆ' ಎಂದೂ ಮೋದಿ ಹೇಳಿದ್ದಾರೆ.
ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.
Alaska Summit ಬಗ್ಗೆ ಮಾಹಿತಿ
ಇನ್ನು ಈ ದೂರವಾಣಿ ಕರೆ ಚರ್ಚೆ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ತಮ್ಮ ಅಲಸ್ಕಾ ಮಾತುಕತೆ ಕುರಿತ ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಟ್ರಂಪ್ ಜತೆಗಿನ ಸಭೆಯಲ್ಲಿ ಉಕ್ರೇನ್–ರಷ್ಯಾ ನಡುವಿನ ಯುದ್ಧವನ್ನು ಅಂತ್ಯಗೊಳಿಸುವ ಸಲುವಾಗಿ ಮಾತುಕತೆ ನಡೆಸಲಾಯಿತು ಎಂಬ ಮಾಹಿತಿಯನ್ನು ಪುಟಿನ್, ಮೋದಿಗೆ ವಿವರಿಸಿದ್ದು, ಅಲಾಸ್ಕದಲ್ಲಿ ನಡೆದ ಸಭೆ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗೆಳೆಯ ಪುಟಿನ್ ಅವರಿಗೆ ಧನ್ಯವಾದಗಳು’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಭಾರತ ಹಿಂದಿನಿಂದಲೂ ಹೇಳುತ್ತಲೇ ಇದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಗೂ ನಮ್ಮ ಬೆಂಬಲ ಇರಲಿದೆ' ಎಂದೂ ಮೋದಿ ಪೋಸ್ಟ್ ನಲ್ಲಿ ಹೇಳಿದ್ದಾರೆ.
ಮೋದಿ ಪೋಸ್ಟ್
'ನನ್ನ ಸ್ನೇಹಿತರಾದ ರಷ್ಯಾ ಅಧ್ಯಕ್ಷ ಪುಟಿನ್ ಅವರು ಫೋನ್ ಮಾಡಿ ಅಲಾಸ್ಕಾದಲ್ಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಒಳನೋಟಗಳನ್ನು ಹಂಚಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ನಿರಂತರವಾಗಿ ಕರೆ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
2ನೇ ದೂರವಾಣಿ ಕರೆ
ಕಳೆದ 2 ವಾರಗಳಲ್ಲಿ ಇದು ಪುಟಿನ್ ಮತ್ತು ಮೋದಿ ಇಬ್ಬರು ನಾಯಕರ ನಡುವಿನ ಎರಡನೇ ದೂರವಾಣಿ ಸಂಭಾಷಣೆ ಇದಾಗಿದೆ. ಆಗಸ್ಟ್ 8ರಂದು ನಡೆದ ಈ ಹಿಂದಿನ ದೂರವಾಣಿ ಕರೆಯಲ್ಲಿ ಉಕ್ರೇನ್‌ಗೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ರಷ್ಯಾ ಅಧ್ಯಕ್ಷ ಪುಟಿನ್ ಭಾರತದ ಪ್ರಧಾನಿ ಮೋದಿಗೆ ವಿವರಿಸಿದ್ದರು.
ಅಂದಹಾಗೆ ಆಗಸ್ಟ್ 15ರಂದು ಅಲಾಸ್ಕಾದಲ್ಲಿ ಅಮೆರಿಕ ಅಧ್ಯಕ್ಷ ಮತ್ತು ರಷ್ಯಾ ಅಧ್ಯಕ್ಷ ಇಬ್ಬರೂ ನಾಯಕರು ಭೇಟಿಯಾಗಿದ್ದರು. ಕಳೆದ ಶುಕ್ರವಾರ ಅಲಾಸ್ಕಾದಲ್ಲಿ ಪುಟಿನ್ ಡೊನಾಲ್ಡ್ ಟ್ರಂಪ್ ಅವರೊಂದಿಗೆ 3 ಗಂಟೆಗಳ ಕಾಲ ಮಾತುಕತೆ ನಡೆಸಿದರು. ಆದರೆ ಸಭೆಯಲ್ಲಿ ಉಭಯ ನಾಯಕರು ಉಕ್ರೇನ್ ಸಂಘರ್ಷ ನಿಲ್ಲಿಸುವ ಕುರಿತು ಯಾವುದೇ ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲವಾದರೂ ಆ ನಿಟ್ಟಿನಲ್ಲಿ ಮುನ್ನಡೆದಿದ್ದೇವೆ ಎಂದು ಹೇಳಿಕೊಂಡಿದ್ದರು.
Advertisement