Jobs: ಭಾರತೀಯ ಜೀವವಿಮಾ ನಿಗಮ (LIC): 491 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ!

ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
LIC Recruitment 2025
ಭಾರತೀಯ ಜೀವ ವಿಮಾ ನಿಗಮ (ಸಂಗ್ರಹ ಚಿತ್ರ)
Updated on

ನವದೆಹಲಿ: ಭಾರತೀಯ ಜೀವ ವಿಮಾ ನಿಗಮವು (LIC) AAO ಮತ್ತು AE ನೇಮಕಾತಿ 2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 491 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

ಎಲ್ ಐಸಿಯ ಸಹಾಯಕ ಆಡಳಿತಾಧಿಕಾರಿಗಳು ಮತ್ತು ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ ಇಂತಿದೆ.

ಹುದ್ದೆಗಳು

ಅಸಿಸ್ಟಂಟ್ ಇಂಜಿನಿಯರ್ (Assistant Engineer) & ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್) (Assistant Administrative Officers)

ಖಾಲಿ ಇರುವ ಹುದ್ದೆಗಳ ಸಂಖ್ಯೆ: 491

ಈ ಪೈಕಿ ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್) 50 ಹುದ್ದೆಗಳು, ಅಸಿಸ್ಟೆಂಟ್ ಎಂಜಿನಿಯರ್ 31 ಹುದ್ದೆಗಳು, ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್) 410 ಹುದ್ದೆಗಳು ಖಾಲಿ ಇವೆ ಎಂದು ಹೇಳಲಾಗಿದೆ.

ಅಭ್ಯರ್ಥಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ

ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್) – ಬಿ.ಟೆಕ್/ ಬಿ.ಇ (ಸಿವಿಲ್)

ಅಸಿಸ್ಟಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್) – ಬಿ.ಟೆಕ್/ ಬಿ.ಇ (ಇಲೆಕ್ಟ್ರಿಕಲ್)

ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್) – ಪದವಿ, ಸಿಎ, ಸಿಎಸ್, ಎಲ್.ಎಲ್.ಬಿ.

LIC Recruitment 2025
ಉದ್ಯೋಗ ಕಡಿತ: TCS ವಿರುದ್ಧ ಕಾರ್ಮಿಕ ಸಚಿವಾಲಯಕ್ಕೆ ಐಟಿ ನೌಕರರ ಒಕ್ಕೂಟ ದೂರು

ವಯೋಮಿತಿ: ದಿನಾಂಕ 01 ಆಗಸ್ಟ್ 2025ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ – ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.

ವೇತನ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 88,635 ರಿಂದ ರೂ. 1,69,025 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು LIC ಇಂಡಿಯಾದ ಅಧಿಕೃತ ವೆಬ್‌ಸೈಟ್ licindia.in ಮೂಲಕ ನೇರ ಲಿಂಕ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

  • ಹಂತ 1: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

  • ಹಂತ 2: ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

    https://ibpsonline.ibps.in/licjul25/

  • ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

  • ಹಂತ 4: ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

  • ಹಂತ 5: ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ:

  • ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 85

  • ಉಳಿದ ಅಭ್ಯರ್ಥಿಗಳು – ರೂ. 700

LIC Recruitment 2025
ಅನುಕಂಪದ ಆಧಾರದ ನೇಮಕಾತಿ: ಕಾಲಮಿತಿಯೊಳಗೆ ಇತ್ಯರ್ಥಪಡಿಸಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಶುಲ್ಕ ಪಾವತಿಸುವ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆ ದಿನಾಂಕ ವಿವರ

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 16, 2025

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 08, 2025

ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಅಕ್ಟೋಬರ್ 03, 2025

ಮುಖ್ಯ ಪರೀಕ್ಷೆ ದಿನಾಂಕ : ನವೆಂಬರ್ 08, 2025

ಅಧಿ ಸೂಚನೆ: https://licindia.in/documents/d/guest/aao-specialist-notification-2025-final

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com