

ನವದೆಹಲಿ: ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಈ ಸಂಭಾಷಣೆಯನ್ನು "ತುಂಬಾ ಉತ್ತಮವಾದ ಸಂಭಾಷಣೆ" ಎಂದು ಮೋದಿ ಬಣ್ಣಿಸಿದ್ದಾರೆ. ಈ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಯ ಸಮಯದಲ್ಲಿ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಬಂದ ಯುರೋಪಿಯನ್ ನಾಯಕರಲ್ಲಿ ಮ್ಯಾಕ್ರನ್ ಕೂಡ ಒಬ್ಬರಾಗಿದ್ದಾರೆ.
"ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಬಹಳ ಉತ್ತಮ ಸಂಭಾಷಣೆ ನಡೆಸಿದೆ. ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳ ಶಾಂತಿಯುತ ಪರಿಹಾರಕ್ಕಾಗಿ ಪ್ರಯತ್ನಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ" ಎಂದು ಮೋದಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
"ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆ" ಎಂದು ಅವರು ಹೇಳಿದ್ದಾರೆ.
ಉಕ್ರೇನ್ ಸಂಘರ್ಷದ ಕುರಿತು ಅಲಾಸ್ಕಾದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಶೃಂಗಸಭೆಯ ಮಾತುಕತೆ ನಡೆಸಿದ ಕೆಲವು ದಿನಗಳ ನಂತರ ಟ್ರಂಪ್ ಜೆಲೆನ್ಸ್ಕಿ ಅವರೊಂದಿಗೆ ಸಭೆ ನಡೆದಿತ್ತು.
Advertisement