Rahul Mamkootathil
ರಾಹುಲ್ ಮಮ್‌ಕೂಟತಿಲ್

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ರಾಜೀನಾಮೆ

ಮಾಜಿ ಯುವ ಕಾಂಗ್ರೆಸ್ ನಾಯಕ ಕೆ.ಎಂ. ಅಭಿಜಿತ್ ಅವರಿಗೆ ರಾಜ್ಯ ಘಟಕದ ತಾತ್ಕಾಲಿಕ ಉಸ್ತುವಾರಿ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
Published on

ತಿರುವನಂತಪುರ: ತಮ್ಮ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಮಮ್‌ಕೂಟತಿಲ್, ಪಕ್ಷವು ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ವರದಿಗಳನ್ನು ನಿರಾಕರಿಸಿದ್ದಾರೆ. ಮೂಲಗಳ ಪ್ರಕಾರ, ರಾಹುಲ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವಕ್ಕೆ ನೀಡಿದ್ದಾರೆ. ತಮ್ಮ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಮಾಜಿ ಯುವ ಕಾಂಗ್ರೆಸ್ ನಾಯಕ ಕೆ.ಎಂ. ಅಭಿಜಿತ್ ಅವರಿಗೆ ರಾಜ್ಯ ಘಟಕದ ತಾತ್ಕಾಲಿಕ ಉಸ್ತುವಾರಿ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

 Rahul Mamkootathil
'ಅಶ್ಲೀಲ ಸಂದೇಶ ಕಳುಹಿಸಿ, ಫೈವ್ ಸ್ಟಾರ್ ಹೋಟೆಲ್ ಗೆ ಬಾ ಅಂತಾನೆ': MLA ವಿರುದ್ಧ ನಟಿ ಆರೋಪ; ಯಾರು ಆ ನಾಯಕ?

ಈ ಮಧ್ಯೆ, ಕೇರಳದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಾ ದಾಸ್ ಮುನ್ಷಿ ಅವರಿಗೆ ಮಹಿಳಾ ಮುಖಂಡರು ರಾಹುಲ್ ವಿರುದ್ಧ ಹಲವಾರು ದೂರುಗಳನ್ನು ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ದೃಢಪಡಿಸಿವೆ. ಮುನ್ಷಿ ಅವರಿಗೆ ಕನಿಷ್ಠ ಆರು ದೂರುಗಳು ಬಂದಿವೆ.

ಮಲಯಾಳಂ ನಟಿ ಹಾಗೂ ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ರಾಜ್ಯದ ಪ್ರಮುಖ ರಾಜಕೀಯ ಪಕ್ಷದ ಯುವ ನಾಯಕ ತನಗೆ ಹಲವು ಬಾರಿ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದರು. ಆ ನಾಯಕ ತನ್ನನ್ನು ಹೋಟೆಲ್‌ಗೆ ಆಹ್ವಾನಿಸಿದ್ದರು, ಬಾರದಿದ್ದರೆ ವಿಷಯವನ್ನು ಪಕ್ಷಕ್ಕೆ ತಿಳಿಸುವುದಾಗಿ ಹೇಳಿದ್ದರು, ಪಕ್ಷದ ಹೆಸರು ಅಥವಾ ಭಾಗಿಯಾಗಿರುವ ರಾಜಕಾರಣಿಯ ಹೆಸರನ್ನು ರಿನಿ ಬಹಿರಂಗಪಡಿಸಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com