ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ!

ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ.
KC Veerendra Pappy
ಕೆಸಿ ವೀರೇಂದ್ರ ಪಪ್ಪಿ
Updated on

ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ವೀರೇಂದ್ರ ಪಪ್ಪಿ ಮೇಲಿದ್ದು ಈ ಸಂಬಂಧ ಗೋವಾದಲ್ಲಿ ಪಪ್ಪಿ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲಯಲ್ಲಿ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ದಾಳಿ ನಡೆಸಿ ದಾಖಲೆ ಪತ್ರಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವೀರೇಂದ್ರ ಅವರು ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಮುಂತಾದ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್ ಮತ್ತು ಪ್ರೈಮ್ 9 ಟೆಕ್ನಾಲಜೀಸ್ ಎಂಬ ಮೂರು ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಸ್ಥೆಗಳು ಕಾಲ್ ಸೆಂಟರ್ ಸೇವೆಗಳು ಮತ್ತು ವೀರೇಂದ್ರ ಅವರ ಗೇಮಿಂಗ್ ವ್ಯವಹಾರಕ್ಕೆ ಸಂಬಂಧಪಟ್ಟಿವೆ. ಏಜೆನ್ಸಿ ಮೂಲಗಳ ಪ್ರಕಾರ, ಬೆಂಗಳೂರಿನಲ್ಲಿರುವ ಕಾಂಗ್ರೆಸ್ ನಾಯಕಿ ಕುಸುಮಾ ಅವರ ಸಹೋದರ ಅನಿಲ್ ಗೌಡ ಎಂಬ ವ್ಯಕ್ತಿಯ ಸ್ಥಳವನ್ನೂ ಸಹ ಶೋಧಿಸಲಾಗಿದೆ.

2016ರಲ್ಲಿಯೂ ದಾಳಿ

20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಅಂದರೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com