
ಅರಾರಿಯಾ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (55) ತಮ್ಮ ಮದುವೆ ಕುರಿತು ಮಾತನಾಡಿದ್ದಾರೆ.
ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗುವಂತೆ ಸಲಹೆ ನೀಡಿದ್ದರು. ಅವರ ಸಲಹೆ ಬಗ್ಗೆ ತಮ್ಮ ರಾಜಕೀಯ ಮಿತ್ರರು ಮತ್ತು ಕುಟುಂಬದ ಸ್ನೇಹಿತರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಜೋಕ್ ಮಾಡಿದ್ದಾರೆ.
ಮತದಾರರ ಅಧಿಕಾರ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಇತ್ತೀಚಿಗೆ ಆರ್ ಜೆಡಿ ಅನ್ನು ತೀವ್ರವಾಗಿ ಟೀಕಿಸಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೇಜಸ್ವಿ, ಚಿರಾಗ್ ಮೊದಲು ಮದುವೆ ಆಗುವುದನ್ನು ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಆಗ ತೇಜಸ್ವಿ ಅವರಿಂದ ಮೈಕ್ ಕಸಿದುಕೊಂಡ ರಾಹುಲ್, ಇದೇ ರೀತಿಯ ಸಲಹೆಯನ್ನು ಎರಡು ವರ್ಷಗಳ ಹಿಂದೆ ತೇಜಸ್ವಿ ಅವರ ತಂದೆ ನನಗೆ ನೀಡಿದ್ದರು ಎಂದು ಹಾಸ್ಯ ಚಟಾಕಿ ಹಾರಿಸಿದರು.
Advertisement