
ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲಿನ ಇತ್ತೀಚಿನ ದಾಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ಇಬ್ಬರೂ ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಕೇಸ್ ದಾಖಲಿಸಿದ್ದಾರೆ.
ತನಿಖಾಧಿಕಾರಿಗಳು, ಈ ಹಲ್ಲೆ ಒಂದು ಪ್ರತ್ಯೇಕ ಕೃತ್ಯವಲ್ಲ, ಬದಲಾಗಿ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಪುರಾವೆಗಳನ್ನು ಕಂಡುಕೊಂಡ ನಂತರ ಹೊಸ ಆರೋಪವನ್ನು ಸೇರಿಸಲಾಗಿದೆ ಎಂದು ದೆಹಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಗಾಗಲೇ ಬಂಧನದಲ್ಲಿರುವ ಆರೋಪಿಗಳಾದ ರಾಜೇಶ್‌ಭಾಯ್ ಖಿಮ್ಜಿ ಮತ್ತು ತಹ್ಸೀನ್ ಸೈಯದ್ ಇಬ್ಬರ ವಿರುದ್ಧವೂ ಹಲ್ಲೆ ಮತ್ತು ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದೀಗ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 61 ರ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಆರೋಪವನ್ನೂ ಸೇರಿಸಲಾಗಿದೆ.
"ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ" ಎಂದು ಅಧಿಕಾರಿ ಹೇಳಿದ್ದಾರೆ.
ಆಗಸ್ಟ್ 20 ರಂದು ಬೆಳಗ್ಗೆ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ದೆಹಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ 'ಜನ ಸಂವಾದ' ಕಾರ್ಯಕ್ರಮದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ, ರೇಖಾ ಗುಪ್ತಾ ಅವರ ಹಲ್ಲೆ ನಡೆಸಿದ್ದರು. ಈ ಹಲ್ಲೆಯನ್ನು "ರೇಖಾ ಅವರನ್ನು ಕೊಲ್ಲಲು ಯೋಜಿತ ಪಿತೂರಿ"ಯ ಭಾಗ ಎಂದು ಅವರ ಕಚೇರಿ ಹೇಳಿದೆ. ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ರಾಜ್‌ಕೋಟ್ ನಿವಾಸಿ ಸಕರಿಯಾ ರಾಜೇಶ್‌ಭಾಯಿ ಖಿಮ್ಜಿಭಾಯಿ(41) ಎಂಬಾತನನ್ನು ಬಂಧಿಸಿ, ಎಫ್ಐಆರ್ ದಾಖಲಿಸಲಾಗಿದೆ.
Advertisement