
ನವದೆಹಲಿ: ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸುವ ಕೊಲಿಜಿಯಂ ಶಿಫಾರಸಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 25 ರಂದು ಸಭೆ ನಡೆಸಿದ ಸಿಜೆಐ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ ಕೆ ಮಹೇಶ್ವರಿ ಮತ್ತು ನಾಗರತ್ನ ಅವರನ್ನೊಳಗೊಂಡ ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಅಕ್ಟೋಬರ್ 2031 ರಲ್ಲಿ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ನಿವೃತ್ತರಾಗಲಿದ್ದಾರೆ. ತದನಂತರ ನ್ಯಾಯಮೂರ್ತಿ ಪಾಂಚೋಲಿ ಅವರು ಮುಖ್ಯ ನ್ಯಾಯಮೂರ್ತಿ ಸ್ಥಾನದ ರೇಸ್ ನಲ್ಲಿರುತ್ತಾರೆ. ವಿವಿಧ ಕಾರಣಗಳಿಂದ ಪಾಂಚೋಲಿ ಅವರ ಹೆಸರನ್ನು ಶಿಫಾರಸು ಮಾಡುವ ಕ್ರಮಕ್ಕೆ ನಾಗರತ್ನ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ನಾಗರತ್ನ ಅವರು ಸುಪ್ರೀಂಕೋರ್ಟ್ ನಲ್ಲಿರುವ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದಾರೆ. ಕಡಿಮೆ ಸೇವಾ ಹಿರಿತನ ಮತ್ತು ಗುಜರಾತ್ ಹೈಕೋರ್ಟ್ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆ ಸುತ್ತಲಿನ ಕಥೆಗಳ ಹೊರತಾಗಿಯೂ ಅವರನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಿರುವುದನ್ನು ನಾಗರತ್ನ ಅವರು ಒತ್ತಿ ಹೇಳಿದ್ದಾರೆ.
ಪಾಂಚೋಲಿ ಅವರು 2023ರ ಜುಲೈನಲ್ಲಿ ಗುಜರಾತ್ ಹೈಕೋರ್ಟ್ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆಯ ಕಾರಣದಿಂದ ನಾಗರತ್ನ ಅವರು ಆಕ್ಷೇಪ ಎತ್ತಿರಬಹುದು ಎಂದು ಮೂಲಗಳು ಹೇಳುತ್ತವೆ.
Advertisement