ಪೂರ್ವಾನುಮತಿ ಇಲ್ಲದೆ ಜರಂಗೆ ಪ್ರತಿಭಟನೆ ನಡೆಸುವಂತಿಲ್ಲ: ಬಾಂಬೆ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.
Manoj Jarange
ಮನೋಜ್ ಜರಂಗೆ
Updated on

ಮುಂಬೈ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಂಗೆ ಅವರು ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸುವಂತಿಲ್ಲ ಮತ್ತು ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟವಧಿಗೆ ಆಕ್ರಮಿಸಿಕೊಳ್ಳುವಂತಿಲ್ಲ ಎಂದು ಮಂಗಳವಾರ ಬಾಂಬೆ ಹೈಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈನಲ್ಲಿ ವೇಗದ ಜೀವನಕ್ಕೆ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸಲು ಪ್ರತಿವಾದಿ(ಜರಂಗೆ)ಗೆ ನವಿ ಮುಂಬೈನ ಖಾರ್ಘರ್‌ನಲ್ಲಿ ಪರ್ಯಾಯ ಸ್ಥಳ ನೀಡಬೇಕೆ ಎಂಬುದರ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಪೀಠ ಹೇಳಿದೆ.

Manoj Jarange
ಮಹಾರಾಷ್ಟ್ರದಲ್ಲಿ ಮತ್ತೆ ಮರಾಠಾ ಮೀಸಲಾತಿ ಕಿಚ್ಚು: ಉಪವಾಸ ಹೋರಾಟ ಆರಂಭಿಸಿದ ಜರಂಗೆ

ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಗುಂಪಿನ ಅಡಿಯಲ್ಲಿ ಮರಾಠಾ ಸಮುದಾಯಕ್ಕೆ ಶೇಕಡಾ 10 ರಷ್ಟು ಮೀಸಲಾತಿ ನೀಡಲು ಜರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರದವರೆಗೆ ಅಂತಿಮ ಗಡುವು ನೀಡಿದ್ದು, ಅದು ವಿಫಲವಾದರೆ ಮರಾಠಾ ಬೆಂಬಲಿಗರೊಂದಿಗೆ ಮುಂಬೈವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಗಸ್ಟ್ 29 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮುಂಬೈನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿದ ಕೋರ್ಟ್, ಸಾರ್ವಜನಿಕ ಸಭೆಗಳು ಮತ್ತು ಪ್ರತಿಭಟನೆಗಳಿಗೆ ಹೊಸ ನಿಯಮಗಳ ಅಡಿಯಲ್ಲಿ ಅನುಮತಿ ಪಡೆದ ನಂತರ ಶಾಂತಿಯುತ ಪ್ರತಿಭಟನೆ ಕೈಗೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ಪ್ರತಿವಾದಿಗಳು(ಜರಂಗೆ ಮತ್ತು ಅವರ ಸಹಚರರು) ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ನಂತರ ಕಾನೂನಿನ ನಿಬಂಧನೆಗಳ ಪ್ರಕಾರ ಸರ್ಕಾರ ಅದನ್ನು ನಿರ್ಧರಿಸಲು ಮುಕ್ತವಾಗಿರುತ್ತದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com