
ಜಮ್ಮು: ಜಮ್ಮುವಿನಲ್ಲಿ ಮಳೆ ಭಾರೀ ಅನಾಹುತ ಸೃಷ್ಟಿಸಿದೆ. ಮಂಗಳವಾರ ಸುರಿದ ರಣಭೀಕರ ಮಳೆಗೆ ಭೂಕುಸಿ, ಮನೆ, ಸೇತುವೆ ಕೊಚ್ಚಿ ಹೋದ ಘಟನೆ ಸಂಭವಿಸಿದ್ದು, ಕನಿಷ್ಟ 32ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಣ ಮಳೆ ಕೇವಲ ಜಮ್ಮು ಅಷ್ಟೇ ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿಯೂ ಹಾನಿಯನ್ನುಂಟು ಮಾಡಿದೆ. ಇಲ್ಲಿನ ಸೇತುವೆಗಳು ಕುಸಿದು ಬಿದ್ದಿದ್ದು, ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಮೂಲಸೌಕರ್ಯ ತೀವ್ರವಾಗಿ ಹಾನಿಗೊಳಗಾಗಿದೆ ಎಂದು ತಿಳಇದುಬಂದಿದೆ.
ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ, ಭೂಕುಸಿತ, ಹಠಾತ್ ಪ್ರವಾಹದಿಂದ ರಸ್ತೆಗಳ ಸಂಚಾರದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲದೆ, ಜಮ್ಮುವಿಗೆ ಹೋಗುವ ಮತ್ತು ಅಲ್ಲಿಂದ ಬರುವ ಅನೇಕ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದವರನ್ನು ಹೊರತೆಗೆಯಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿದ್ದಾರೆ. ಹಿಮಕೋಟಿ ದೇಗುಲದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿಗೊಳಿಸಲಾಗಿದೆ.
ಈ ಬಗ್ಗೆ ಯಾತ್ರಿಕರೊಬ್ಬರು ಮಾತನಾಡಿ, "ನಾನು ದರ್ಶನ ಪಡೆದು ಬೆಟ್ಟದಿಂದ ಕೆಳಗೆ ಬರುತ್ತಿದ್ದಾಗ ಜನರು ಕೂಗಾಡಲು ಪ್ರಾರಂಭಿಸಿದ್ದರು. ಕಲ್ಲುಗಳು ಕೆಳಗೆ ಬೀಳುವುದನ್ನು ನಾನು ನೋಡಿದೆ. ಕೂಡಲೇ ನಾನು ಸುರಕ್ಷಿತ ಸ್ಥಳಕ್ಕೆ ಧಾವಿಸಿದೆ. ಆದರೂ ಗಾಯಗೊಂಡೆ ಎಂದು ಎಂದು ಹೇಳಿದ್ದಾರೆ.
ನಮ್ಮದು 5 ಜನರ ಗುಂಪಾಗಿತ್ತು. ಮೂವರು ಗಾಯಗೊಂಡಿದ್ದಾರೆ. ಬಾಲಕಿಯೊಬ್ಬಳು ದೃಶ್ಯ ನೋಡಿ ಭಯಭೀತಳಾಗಿ ಮುರ್ಛೆ ಹೋದಳು. ಬಳಿಕ ಬಾಲಕಿ ಹಾಗೂ ಗಾಯಾಳುಗಳನ್ನು ಜಮ್ಮುವಿನಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಕತ್ರಾದ ನಾರಾಯಣ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ತಿಳಿಸಿದ್ದಾರೆ.
ಕತ್ರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಮ್ಮುವಿನ ರಕ್ಷಣಾ ಇಲಾಖೆಯ ಪಿಆರ್‌ಒ ತಿಳಿಸಿದ್ದಾರೆ.
Advertisement