
ಗಡ್ಚಿರೋಲಿ: ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಛತ್ತೀಸ್‌ಗಢದ ಗಡ್ಚಿರೋಲಿ ಮತ್ತು ನಾರಾಯಣಪುರ ಜಿಲ್ಲೆಯ ಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಪರ್ಶಿ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ಆಗಸ್ಟ್ 25 ರಂದು ಪೊಲೀಸರಿಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ನಕ್ಸಲ್ ವಿರೋಧಿ ಕಮಾಂಡೋ ಪಡೆ ಮತ್ತು ಸಿಆರ್‌ಪಿಎಫ್‌ನ ಕ್ಷೀಪ್ರ ಕಾರ್ಯಪಡೆಯ ಎರಡು ತುಕಡಿಗಳನ್ನು ಪ್ರದೇಶಕ್ಕೆ ಅಲ್ಲಿಗೆ ಕಳುಹಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಇಂದು ಬೆಳಗ್ಗೆ ಅರಣ್ಯ ಪ್ರದೇಶ ತಲುಪಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.
ಸುಮಾರು ಎಂಟು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಮೂವರು ಮಹಿಳೆಯರು ಮತ್ತು ಒಬ್ಬ ಪುರುಷನ ಮೃತದೇಹಗಳನ್ನು ಮತ್ತು ಒಂದು ಎಸ್‌ಎಲ್‌ಆರ್ ರೈಫಲ್, ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು ಮತ್ತು ಒಂದು 303 ರೈಫಲ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
Advertisement