
ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರನ್ನು ಇಂದು ನಸುಕಿನ ಜಾವ ಹತ್ಯೆ ಮಾಡಿವೆ.
ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು -ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ X ನಲ್ಲಿ ತಿಳಿಸಿದೆ.
ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು ಒಳನುಸುಳುವವರನ್ನು ಗಮನಿಸಿದಾಗ ಅವರು ಮನಬಂದಂತೆ ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯೆ ನೀಡಲಾರಂಭಿಸಿದರು. ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿ, ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದವು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
Advertisement