
ಒಡಿಶಾ: ಪ್ರಯಾಣಿಕರ ವ್ಯಾನ್‌ನಲ್ಲಿ 21 ವರ್ಷದ ಯುವತಿಯ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಉಡಾಲ ಪೊಲೀಸ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಈ ಘಟನೆ ಶುಕ್ರವಾರ ಸಂಜೆ 6 ರಿಂದ 7 ಗಂಟೆಯ ನಡುವೆ ಉಡಾಲ-ಬಲಸೋರ್ ರಸ್ತೆಯಲ್ಲಿ ನಡೆದಿದೆ. ಸರತ್ ಪ್ರದೇಶದ ಆರೋಪಿಗಳೆಲ್ಲರೂ ಚಲಿಸುವ ವ್ಯಾನ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಸಹಾಯಕ್ಕಾಗಿ ಕಿರುಚಿದಾಗ ಆಕೆಯನ್ನು ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ವರದಿಯಾಗಿದೆ.
ಈ ವರ್ಷದ ಆರಂಭದಲ್ಲಿ ಬಂಗಿರಿಪೋಸಿಯಲ್ಲಿ ನಡೆದ ಮಕರ ಹಬ್ಬದ ಆಚರಣೆಯ ಸಂದರ್ಭದಲ್ಲಿ ಭೇಟಿಯಾದ ಇಬ್ಬರು ಆರೋಪಿಗಳೊಂದಿಗೆ ತನ್ನ ಮಗಳಿಗೆ ಪರಿಚಯವಿತ್ತು. ಇಬ್ಬರೂ ಆಕೆಯ ಫೋನ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡಿದ್ದರು.
ನಂತರ ಖಾಸಗಿ ಕಂಪನಿಯಲ್ಲಿ ಉದ್ಯೋಗವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದರು. ಅವರ ಮಾತುಗಳನ್ನು ನಂಬಿ ಮಗಳನ್ನು ಅವರೊಂದಿಗೆ ಕಳಿಸಿದ್ದೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ.
ಪರಿಚಯವಿದ್ದ ಇಬ್ಬರು ಆರೋಪಿಗಳು ಇತರ ನಾಲ್ವರೊಂದಿಗೆ ಯುವತಿಯ ಮನೆಗೆ ಹೋಗಿ ಅವಳನ್ನು ತಮ್ಮೊಂದಿಗೆ ಬರುವಂತೆ ಮನವೊಲಿಸಿದ್ದಾರೆ.
ವಾಹನವು ಕಪ್ತಿಪಡ ಚೌಕ್‌ನಿಂದ ಬಾಲಸೋರ್ ಕಡೆಗೆ ಹೋಗುತ್ತಿದ್ದಾಗ, ಬಂಗಿರಿಪೋಸಿಯಿಂದ ಸುಮಾರು 70 ಕಿ.ಮೀ ದೂರದಲ್ಲಿ ವೇಳೆ ವ್ಯಾನ್‌ನೊಳಗೆ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಸಹಾಯಕ್ಕಾಗಿ ಆಕೆ ಕಿರುಚಿದಾಗ, ಆರೋಪಿಗಳು ಆಕೆಯನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದರು.
ಯುವತಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿ ಕರೆದೊಯ್ದು ಠಾಣೆಗೆ ದೂರು ನೀಡಿದ್ದಾರೆ. ಘಟನೆ ಕುರಿತು ಉಡಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶನಿವಾರ ಬೆಳಗಿನ ಜಾವ ಇಬ್ಬರನ್ನು ಬಂಧಿಸಿದ್ದಾರೆ.
Advertisement