
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬರು ತನ್ನ ಗೆಳೆಯನೊಂದಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.
ಟಿಟ್ವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ಯುವತಿಯ ಬಾಯ್ಫ್ರೆಂಡ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
"ನಾವು ಯುವತಿಯ ಗೆಳೆಯನನ್ನು ಬಂಧಿಸಿದ್ದೇವೆ ಮತ್ತು ವಿಚಾರಣೆ ನಡೆಸುತ್ತಿದ್ದೇವೆ. ಈ ರೀತಿ ಆತ ಇತರ ಹಲವು ಹುಡುಗಿಯರನ್ನು ವಂಚಿಸಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ" ಎಂದು ಟಿಟ್ವಾಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಯುವಕ ಮತ್ತು ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದು, ಬಳಿಕ ಸ್ನೇಹಿತರಾದರು ಮತ್ತು ಸಂಬಂಧ ಹೊಂದಿದ್ದರು. "ಯುವಕ ಹಲವು ನೆಪ ಹೇಳಿ ಆಕೆಯ ಆಭರಣಗಳನ್ನು ತೆಗೆದುಕೊಂಡಿದ್ದ. ಆಭರಣಗಳನ್ನು ಹಿಂತಿರುಗಿಸುವಂತೆ ಕೇಳಿದಾಗ, ಆಕೆಯ ಖಾಸಗಿ ವಿಡಿಯೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿ ಆಕೆಗೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದನು" ಎಂದು ಯುವತಿಯ ಕುಟುಂಬದ ಹೇಳಿಕೆಯನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.
ಕಿರುಕುಳವನ್ನು ಸಹಿಸಲಾಗದೆ ಯುವತಿ, ವಿಡಿಯೋ ಕಾಲ್ ಮಾಡಿ, ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಯುವತಿಯ ಫೋನ್ ಪರಿಶೀಲಿಸಿದಾಗ, ಆಕೆ ತನ್ನ ಗೆಳೆಯನೊಂದಿಗೆ ವಿಡಿಯೋ ಕರೆಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement