

ತಿರುವನಂತಪುರ: ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ (ಕಿಫ್‌ಬಿ) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
466 ಕೋಟಿ ರೂ. ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಇಸಾಕ್ ಮತ್ತು ಸಿಎಂ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲಯವು ನೋಟೀಸ್ ಜಾರಿ ಮಾಡಿದೆ.
ವೈಯಕ್ತಿಕ ಹಾಜರಾತಿಯ ಅಗತ್ಯವಿಲ್ಲದ ಈ ನೋಟಿಸ್ ಅನ್ನು ಫೆಡರಲ್ ತನಿಖಾ ಸಂಸ್ಥೆ ಸುಮಾರು 10-12 ದಿನಗಳ ಹಿಂದೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ದ ನಿಬಂಧನೆಗಳ ಅಡಿಯಲ್ಲಿ ನೀಡಿದೆ.
2019ರಲ್ಲಿ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಮಸಾಲಾ ಬಾಂಡ್‌ಗಳ ಮೂಲಕ ಕಿಫ್‌ಬಿ ₹2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ. ಕಿಫ್‌ಬಿಯ ಮಸಾಲಾ ಬಾಂಡ್‌ನಲ್ಲಿ ಅಕ್ರಮಗಳು ನಡೆದಿವೆ ಎಂದು ಆಡಿಟರ್ ಜನರಲ್ ಈ ಹಿಂದೆ ಪ್ರಸ್ತಾಪಿಸಿದ್ದರು.
Advertisement