First year BTech student dies by suicide in KIIT, third such death of the year
ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ)

KIITಯ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಮೂರನೇ ಸಾವು

ರಾಜಧಾನಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಓದುತ್ತಿದ್ದ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
Published on

ಭುವನೇಶ್ವರ: ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ) ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಈ ವರ್ಷ ನಡೆದ ಮೂರನೇ ಘಟನೆಯಾಗಿದೆ.

ರಾಜಧಾನಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಓದುತ್ತಿದ್ದ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

19 ವರ್ಷದ ಮೃತ ವ್ಯಕ್ತಿ ಛತ್ತೀಸ್‌ಗಢ ಮೂಲದವನಾಗಿದ್ದು, ಕೆಐಐಟಿ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಪ್ರೋಗ್ರಾಂಗೆ ದಾಖಲಾಗಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

First year BTech student dies by suicide in KIIT, third such death of the year
ಶಾಲೆಯಲ್ಲಿ ಕಿರುಕುಳ: ಮೆಟ್ರೋ ನಿಲ್ದಾಣದಿಂದ ಜಿಗಿದು 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ; 3 ಶಿಕ್ಷಕರು ಅಮಾನತು!

ಭಾನುವಾರ ರಾತ್ರಿ 10 ಗಂಟೆಯ ನಂತರ ಘಟನೆಯ ಬಗ್ಗೆ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಯುವಕ ತನ್ನ ಹಾಸ್ಟೆಲ್ ಕೋಣೆಯಲ್ಲಿ ಬಟ್ಟೆಯನ್ನು ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

ಯುವಕ ಆತ್ಮಹತ್ಯೆ ಮಾಡಿಕೊಂಡಾಗ ಆತನ ರೂಮ್‌ಮೇಟ್‌ಗಳು ಇರಲಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಮತ್ತು ತನಿಖೆಯ ಭಾಗವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಭೇಟಿ ನೀಡಿದೆ.

ಯುವಕ ತನ್ನ ಪ್ರಾಣವನ್ನು ಕಳೆದುಕೊಳ್ಳುವ ಮೊದಲು ಯಾವುದೇ ಡೆತ್ ನೋಟ್ ಬರೆದಿರುವ ಬಗ್ಗೆ ಪೊಲೀಸರು ಬಹಿರಂಗಪಡಿಸಿಲ್ಲ. ಯುವಕನ ಈ ಕಠಿಣ ನಿರ್ಧಾರದ ಹಿಂದಿನ ಕಾರಣವೂ ತನಿಖೆಯಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವಿಷಯದ ಬಗ್ಗೆ ತಕ್ಷಣ ಪ್ರತಿಕ್ರಿಯಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳು ನಿರಾಕರಿಸಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಹೇಳಿಕೆ ನೀಡುವುದಾಗಿ ತಿಳಿಸಿದ್ದಾರೆ.

ಇದು ಮೂರನೇ ಘಟನೆ

ಈ ವರ್ಷ ಕೆಐಐಟಿ ಕ್ಯಾಂಪಸ್‌ನಲ್ಲಿ ನಡೆದ ಮೂರನೇ ಆತ್ಯಹತ್ಯೆಯಾಗಿದ್ದು, ಫೆಬ್ರವರಿ 16 ರಂದು ಇದೇ ಸಂಸ್ಥೆಯ 21 ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯ ಕಿರುಕುಳದ ಪರಿಣಾಮವಾಗಿ 20 ವರ್ಷದ ನೇಪಾಳದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆಯು ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಮೇ 1 ರಂದು, ನೇಪಾಳದ ಪದವಿಪೂರ್ವ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಸಂಸ್ಥೆಯ ಬಾಲಕಿಯರ ಹಾಸ್ಟೆಲ್‌ನ ತನ್ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com