

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಕಾಳಗದಲ್ಲಿ ಜಿಲ್ಲಾ ಮೀಸಲು ಪೊಲೀಸ್ ಪಡೆ(ಡಿಆರ್‌ಜಿ)ಯ ಒಬ್ಬ ಜವಾನ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
ದಂತೇವಾಡ ಜಿಲ್ಲೆಯ ಪಕ್ಕದಲ್ಲಿರುವ ಗಂಗಲೂರು ಪ್ರದೇಶದ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಪೊಲೀಸರ ಎರಡೂ ಘಟಕಗಳಾದ ಡಿಆರ್‌ಜಿ ಮತ್ತು ವಿಶೇಷ ಕಾರ್ಯಪಡೆ ಹಾಗೂ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಇಲ್ಲಿಯವರೆಗೆ, ಸ್ಥಳದಿಂದ ಐದು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
"ಕಾರ್ಯಾಚರಣೆಯಲ್ಲಿ ಒಬ್ಬ ಡಿಆರ್‌ಜಿ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತೊಬ್ಬ ಜವಾನ್ ಗಾಯಗೊಂಡಿದ್ದಾರೆ. ಗಾಯಗೊಂಡ ಜವಾನ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಅವರು ಹೇಳಿದರು.
Advertisement