IndiGo flights: ಮತ್ತೆ 500 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೋ ಏರ್‌ಲೈನ್ಸ್‌, ವಿಮಾನಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ

ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ, ಶುಕ್ರವಾರ ಮತ್ತೆ 500 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ.
Passengers remain stranded across various airports after IndiGo cancelled several flight services on Friday,
ಹಲವಾರು ವಿಮಾನ ಸೇವೆಗಳನ್ನು ರದ್ದುಗೊಳಿಸಿದ ನಂತರ ಪ್ರಯಾಣಿಕರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸಿಲುಕಿ, ಸಂಕಷ್ಟ ಎದುರಿಸುತ್ತಿರುವುದು.
Updated on

ಮುಂಬೈ/ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಷಯ ಅಂದರೆ ಅದು ವಿಮಾನ ರದ್ದು ವಿಚಾರ, ಅದರಲ್ಲೂ ಭಾರತೀಯ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋ ವಿಮಾನಗಳು (IndiGo Flights) ಭಾರೀ ಸುದ್ದಿಯಲ್ಲಿದೆ,

ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ, ಶುಕ್ರವಾರ ಮತ್ತೆ 500 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಮನ ಮತ್ತು ನಿರ್ಗಮನ ಸೇರಿದಂತೆ 220 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿಯೂ 90 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು, ವಿಮಾನಯಾನ ಸಂಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

Passengers remain stranded across various airports after IndiGo cancelled several flight services on Friday,
Watch | 300 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ರದ್ದು; ದರ್ಶನ್ ಗೆ ಟಿವಿ ಭಾಗ್ಯ; ಮಸೀದಿಗೆ ನುಗ್ಗಲು ಹನುಮ ಮಾಲಾಧಾರಿಗಳು ಯತ್ನ!

ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ತಮ್ಮ ಲಗೇಜ್‌ ಪಡೆಯಲು 12 ಗಂಟೆಗಳಿಗೂ ಹೆಚ್ಚು ಕಾಲ ಪರದಾಡುವಂತಿದ್ದು, ಕೆಲವರು ಆಹಾರ ಮತ್ತು ನೀರಿನ ಕೊರತೆ ಎದುರಿಸಿದ್ದಾರೆಂದು ತಿಳಿದುಬಂದಿದೆ.

ಇಂಡಿಗೋ ಆರಂಭವಾಗಿ 20 ವರ್ಷವಾದರೂ, ಅದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ರದ್ದಾಗಿದೆ.

ಸತತ ನಾಲ್ಕನೇ ದಿನವೂ ಕಾರ್ಯಾಚರಣೆಯ ಅಡೆತಡೆಗಳು ಇಂಡಿಗೋ ಏರ್‌ಲೈನ್‌ನಲ್ಲಿ ಮುಂದುವರಿದಿದ್ದು, ಪೈಲಟ್‌ ನಿಯೋಜನೆಯಲ್ಲಿ ಸಮಸ್ಯೆಗಳು ಮತ್ತು ತಾಂತ್ರಿಕ ಅಡಚಣೆಗಳು ಸೇರಿದಂತೆ ಹಲವು ಅಂಶಗಳು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಕಾರ್ಯಾಚರಣೆಗಳನ್ನು ಸಹಜ ಸ್ಥಿತಿಗೆ ತರಲು ಇಂಡಿಗೋ ತನ್ನ ಪ್ರಯಾಣದ ವೇಳಾಪಟ್ಟಿಗಳನ್ನು ಅಪ್ಡೇಟ್‌ ಮಾಡಿದೆ. ಮುಂಬರುವ ಎರಡು-ಮೂರು ದಿನಗಳಲ್ಲೂ ಮತ್ತಷ್ಟು ವಿಮಾನಗಳು ರದ್ದಾಗಬಹುದು ಎಂದು ವಿಮಾನಯಾನ ಸಂಸ್ಥೆ ಜನರಿಗೆ ಸೂಚನೆ ನೀಡಿದೆ.

'ಫೆಬ್ರವರಿ 2026 ರ ವೇಳೆಗೆ ಸ್ಥಿರ ಕಾರ್ಯಾಚರಣೆ ನಿರೀಕ್ಷೆ'

ಪ್ರತಿದಿನ 2,300 ವಿಮಾನಗಳನ್ನು ನಿರ್ವಹಿಸುವ ಇಂಡಿಗೋ, ಸಮಯಪಾಲನೆಗೆ ಹೆಸರುವಾಸಿಯಾಗಿತ್ತು. ಈ ಗಂಭೀರ ಪರಿಸ್ಥಿತಿಯ ಕುರಿತು ಪರಿಶೀಲಿಸಲು, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿಮಾನಯಾನ ನಿಯಂತ್ರಕ ಡಿಜಿಸಿಎ ಅಧಿಕಾರಿಗಳು ಗುರುವಾರ ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಹಾರಕ್ಕಾಗಿ ಚರ್ಚೆ ನಡೆಸಿದ್ದಾರೆ.

ಕಾರ್ಯಾಚರಣೆಗಳನ್ನು ಸಹಜ ಸ್ಥಿತಿಗೆ ತರುವುದು ಮತ್ತು ಸಮಯಪಾಲನೆಯನ್ನು ಮರಳಿ ತರುವುದು ಸುಲಭದ ಗುರಿಯಲ್ಲ ಎಂದು ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ತಮ್ಮ ಸಿಬ್ಬಂದಿಗೆ ತಿಳಿಸಿದ್ದಾರೆ.

ಫೆಬ್ರವರಿ 10, 2026 ರ ವೇಳೆಗೆ ಮಾತ್ರ ಸಾಮಾನ್ಯ ಮತ್ತು ಸ್ಥಿರ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಪುನಃಸ್ಥಾಪಿಸುವ ನಿರೀಕ್ಷೆಯಿದೆ. ಮುಂದಿನ ಮೂರು ದಿನಗಳಲ್ಲಿ ವಿಮಾನ ರದ್ದತಿ ಮುಂದುವರಿಯುತ್ತದೆ ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಡಿಸೆಂಬರ್ 8 ರಿಂದ ವಿಮಾನ ಕಾರ್ಯಾಚರಣೆಯನ್ನು ಕಡಿಮೆ ಮಾಡಲಾಗುತ್ತದೆ ವಿಮಾನಯಾನ ಸಂಸ್ಥೆ ತಿಳಿಸಿದೆ.

ಅಲ್ಲದೆ, ಇಂಡಿಗೋ ತನ್ನ A320 ವಿಮಾನಗಳಿಗೆ ಕೆಲವು ಹಾರಾಟ ಕರ್ತವ್ಯ ಸಮಯ ಮಿತಿ (FDTL) ಮಾನದಂಡಗಳಿಂದ ವಿನಾಯಿತಿ ನೀಡುವಂತೆ ಕೋರಿದೆ ಎಂದು ಡಿಜಿಸಿಎ ತಿಳಿಸಿದೆ.

ಮೂಲಗಳು ಪ್ರಕಾರ, ಇಂಡಿಗೋ ಕಾಕ್‌ಪಿಟ್ ಮತ್ತು ಕ್ಯಾಬಿನ್ ಸಿಬ್ಬಂದಿ ಎರಡರ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ಈ ವಾರ ದೆಹಲಿ ಮತ್ತು ಮುಂಬೈನಲ್ಲಿ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ನಡೆಸಿದ ಬೃಹತ್ ನೇಮಕಾತಿ ಚಾಲನೆಯಿಂದಾಗಿ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com