

ಪಣಜಿ: ನೈಟ್ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡಾಗ ಡ್ಯಾನ್ಸ್ ಫ್ಲೋರ್‌ನಲ್ಲಿ ಕನಿಷ್ಠ 100 ಮಂದಿ ಇದ್ದರು. ಬೆಂಕಿ ಕಾಣಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಡುಗೆ ಕೋಣೆಯತ್ತ ಓಡಿ ಹೋದರು. ಇದರಿಂದಾಗಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಿಕ್ಕಿಹಾಕಿಕೊಂಡರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಸಿಲಿಂಡರ್ ಸ್ಫೋಟದಿಂದಾಗಿ ನೈಟ್‌ಕ್ಲಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಪೊಲೀಸರು ಹೇಳಿದರೆ, ಪ್ರವಾಸಿಗರು ನೃತ್ಯ ಮಾಡುತ್ತಿದ್ದ ಕ್ಲಬ್‌ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಲ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಕೆಲಸಗಾರರಾಗಿದ್ದು, ಮೂವರು ಮಹಿಳೆಯರು ಸೇರಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಸಾವನ್ನಪ್ಪಿದವರಲ್ಲಿ ಮೂರರಿಂದ ನಾಲ್ಕು ಪ್ರವಾಸಿಗರು ಇದ್ದಾರೆ ಎಂದು ತಿಳಿಸಿದ್ದಾರೆ.
ಕ್ಲಬ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿದ್ದವು ಆತಂಕಕ್ಕೊಳಗಾಗಿದ್ದರು. ಇದರಿಂದ ಗದ್ದಲ ಉಂಟಾಗಿತ್ತು. ನಾವು ಹೊರಗೆ ಓಡಿ ಹೋಗಾದ ಬೆಂಕಿಯ ಕೆನ್ನಾಲಿಗೆ ಇಡೀ ಕ್ಲಬ್ ಆವರಿಸಿರುವುದು ಕಂಡು ಬಂದಿತ್ತು ಎಂದು ಹೈದರಾಬಾದ್‌ನ ಪ್ರವಾಸಿ ಫಾತಿಮಾ ಶೇಖ್ ಅವರು ಹೇಳಿದ್ದಾರೆ.
ವಾರಾಂತ್ಯವಾಗಿದ್ದರಿಂದ ನೈಟ್‌ಕ್ಲಬ್'ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಡ್ಯಾನ್ಸ್ ಫ್ಲೋರ್‌ನಲ್ಲಿ ಕನಿಷ್ಠ 100 ಜನರಿದ್ದರು. ಬೆಂಕಿ ಹೊತ್ತಿಕೊಂಡ ಬಳಿಕ ಕೆಲವರು ಕೆಳಗೆ ಓಡಲು ಪ್ರಾರಂಭಿಸಿದ್ದರು. ನೆಲ ಮಹಡಿಯಲ್ಲಿರುವವರು ಅಡುಗೆಮನೆಯತ್ತ ಹೋದರು. ಈ ವೇಳೆ ಅಲ್ಲಿದ್ದ ಸಿಬ್ಬಂದಿಗಳೊಂದಿಗೂ ಸಿಲುಕಿಕೊಂಡಿದ್ದರು. ಕೆಲವರು ಹೊರಗೆ ಬರುವಲ್ಲಿ ಯಶಸ್ವಿಯಾದರೆ, ಇನ್ನೂ ಕೆಲವರು ಸಜೀವ ದಹನವಾದರು ಎದು ತಿಳಿಸಿದ್ದಾರೆ.
ನೈಟ್‌ಕ್ಲಬ್ ಅರ್ಪೋರಾ ನದಿಯ ಹಿನ್ನೀರಿನಲ್ಲಿದ್ದು, ಅದು ಕಿರಿದಾದ ಪ್ರವೇಶ ಮತ್ತು ನಿರ್ಗಮನ ಮಾರ್ಗವನ್ನು ಹೊಂದಿದೆ. ಕಿರಿದಾದ ಮಾರ್ಗ ಮತ್ತು ಟ್ಯಾಂಕರ್‌ಗಳನ್ನು ಸ್ಥಳದಿಂದ ಸುಮಾರು 400 ಮೀಟರ್ ದೂರದಲ್ಲಿ ನಿಲ್ಲಿಸಬೇಕಾಗಿರುವುದರಿಂದ ಕ್ಲಬ್‌ಗೆ ಅಗ್ನಿಶಾಮಕ ದಳದವರ ಪ್ರವೇಶ ಸುಲಭವಾಗಿರಲಿಲ್ಲ. ಇದರಿಂದ ಬೆಂಕಿಯ ಕೆನ್ನಾಲಿಗೆ ಶೀಘ್ರಗತಿಯಲ್ಲಿ ನಿಲ್ಲಿಸುವುದು ಸವಾಲಿನ ಕೆಲಸವಾಗಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಿರಿಯ ಅಧಿಕಾರಿ ಹೇಳಿದ್ದಾರೆ.
ಈ ನಡುವೆ ಘಟನಾ ಸ್ಥಳಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಭೇಟಿ ನೀಡಿ, ಬ್ ಆಡಳಿತ ಮಂಡಳಿ ಮತ್ತು ಸ್ಥಾಪನೆಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Advertisement