

ನಾಸಿಕ್: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಕಂದಕಕ್ಕೆ ಉರುಳಿ ಕನಿಷ್ಠ 6 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಭಾನುವಾರ ನಾಸಿಕ್‌ನ ಕಲ್ವಾನ್ ತಾಲ್ಲೂಕಿನ ಸಪ್ತಶ್ರಿಂಗ್ ಗರ್ ಘಾಟ್‌ನಲ್ಲಿ ಣೇಶ್ ಪಾಯಿಂಟ್ ಬಳಿ ಘಟನೆ ಸಂಜೆ 4 ಗಂಟೆಗೆ ಈ ಘಟನೆ ನಡೆದಿದ್ದು, ಕಾರು 600 ಅಡಿ ಆಳದ ಕಂದಕಕ್ಕೆ ಬಿದ್ದು ಅದರಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನಿಫಾದ್ ತಾಲ್ಲೂಕಿನ ಪಿಂಪಾಲ್‌ಗಾಂವ್ ಬಸ್ವಂತ್‌ನವರು ಎಂದು ಅಧಿಕಾರಿ ತಿಳಿಸಿದ್ದಾರೆ.
ತೀರ್ಥಯಾತ್ರೆ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಮೂಲಗಳ ಪ್ರಕಾರ ಇನ್ನೋವಾ ಕಾರಿನಲ್ಲಿ ಪೂಜ್ಯ ಸಪ್ತಶೃಂಗಿ ದೇವಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಹೋಗಿ ವಾಪಸ್ ಆಗುತ್ತಿದ್ದಾಗ ಕಾರು ಕಂದಕಕ್ಕೆ ಉರುಳಿದೆ.
ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿ ಒಟ್ಟು 7ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ.. ಮೃತರನ್ನು ಕೀರ್ತಿ ಪಟೇಲ್ (50), ರಸೀಲಾ ಪಟೇಲ್ (50), ವಿಠ್ಠಲ್ ಪಟೇಲ್ (65), ಲತಾ ಪಟೇಲ್ (60), ವಚನ್ ಪಟೇಲ್ (60) ಮತ್ತು ಮಣಿಬೆನ್ ಪಟೇಲ್ (70) ಎಂದು ಗುರುತಿಸಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಬಾಲಾಸಾಹೇಬ್ ಪಾಟೀಲ್ ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ. ಅಂತೆಯೇ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಸಿಬ್ಬಂದಿ ಮತ್ತು ಪೊಲೀಸರ ನಿಯೋಜನೆಯೊಂದಿಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ನಿವಾಸಿ ಉಪ ಸಂಗ್ರಾಹಕ ಮತ್ತು ಜಿಲ್ಲಾ ವಿಪತ್ತು ಪ್ರಾಧಿಕಾರದ ಸಿಇಒ ರೋಹಿತ್‌ಕುಮಾರ್ ರಜಪೂತ್ ತಿಳಿಸಿದ್ದಾರೆ.
ಕಠಿಣ ಪರ್ವತ ರಸ್ತೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ ಸಂತಾಪ
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. 'ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ದೇವೇಂದ್ರ ಫಡ್ನವಿಸ್ ಪರಿಹಾರ ಘೋಷಣೆ
ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಘಟನೆಯನ್ನು "ಅತ್ಯಂತ ದುರಂತ" ಎಂದು ಕರೆದಿದ್ದು, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಸರ್ಕಾರವು ಮೃತರ ಕುಟುಂಬಗಳೊಂದಿಗೆ ನಿಂತಿದೆ ಮತ್ತು ಸ್ಥಳದಲ್ಲಿ ಸಂಪೂರ್ಣ ಆಡಳಿತಾತ್ಮಕ ಬೆಂಬಲದೊಂದಿಗೆ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement