

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್‌ನ ಫಿರೋಜ್‌ಪುರ ನಿವಾಸಿ ಕಾನ್‌ಸ್ಟೆಬಲ್ ಸುಖದೀಪ್ ಸಿಂಗ್ ಸೋಮವಾರ ಸಂಜೆ ರೆಹಿಯಾನ್ ಗ್ರಾಮದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕೂಡಲೇ ಸ್ಥಳೀಯರು ಅವರನ್ನು ಸಾಂಬಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿದರು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಅವರು ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದು ಮತ್ತು ಆಕಸ್ಮಿಕವಾಗಿ ಕಾಲುವೆಗೆ ಬಿದ್ದಿರಬಹುದು ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಸೋಮವಾರ ತಡರಾತ್ರಿ ಜಮ್ಮುವಿನ ನಾಗ್ರೋಟಾ ಪ್ರದೇಶದ ಶಿಬಿರದೊಳಗೆ ಕುಸಿದು ಬಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
Advertisement