

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10 ರಂದು ನಡೆದ ಸ್ಫೋಟ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ (ಎನ್‌ಐಎ) ದಳ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಡಾ. ಅದೀಲ್ ರಾಥರ್ ಮತ್ತು ಜಾಸಿರ್ ಬಿಲಾಲ್ ವಾನಿ ಅವರನ್ನು ಪೊಲೀಸರು ಮತ್ತು ಸಿಆರ್‌ಪಿಎಫ್ ಸಹಾಯದಿಂದ ಎನ್‌ಐಎ ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Advertisement