ಅಪಘಾತಗೊಂಡ ಬಸ್
ದೇಶ
ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು, 27 ಜನರಿಗೆ ಗಾಯ
ಬಿಕಾನೇರ್ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ.
ಬಿಕಾನೇರ್ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
15 ಮಂದಿ ಗಾಯಾಳುಗಳನ್ನು ಸಿಕಾರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, 13 ಮಂದಿಗೆ ಫತೇಘರ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸಿಕಾರ್ ಜಿಲ್ಲಾ ಆಸ್ಪತ್ರೆಯಿಂದ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಕರೆದೊಯ್ಯಲಾದ ಒಬ್ಬ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ನಂತರ ಪ್ರಯಾಣಿಕರ ತಂಡ ಗುಜರಾತ್‌ಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.