

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (MGNREGA)ಗೆ ಮರುನಾಮಕರಣ ಮಾಡುವ ಮಸೂದೆಗೆ ಸಂಪುಟ ಅನುಮೋದನೆ ನೀಡುವುದರೊಂದಿಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕ್ರೆಡಿಟ್ ಪಡೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.
ಈ ಕ್ರಮವು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯಿಸಿದ ಯೋಜನೆ ಬಗ್ಗೆ ಕಾಗದದ ಮೇಲಿನ ಬದಲಾವಣೆಯಲ್ಲದೆ ಬೇರೇನೂ ಅಲ್ಲ ಎಂದು ಹೇಳಿದೆ. MGNREGAಗೆ ಮರು ನಾಮಕರಣ ಮತ್ತು ಕೆಲಸದ ದಿನಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ': ಮನ್ರೇಗಾ ಯೋಜನೆಯನ್ನು ಈಗ 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲಾಗುತ್ತಿದ್ದು, ಕೆಲಸದ ದಿನಗಳ ಸಂಖ್ಯೆಯನ್ನು ಪ್ರಸ್ತುತ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ಮೂಲಗಳು ಉಲ್ಲೇಖಿಸಿವೆ.
ಒಂದು ಕಾಲದಲ್ಲಿ ಮನ್ರೇಗಾ ಯೋಜನೆಯನ್ನು "ವೈಫಲ್ಯದ ಜೀವಂತ ಸ್ಮಾರಕ" ಎಂದು ಕರೆದಿದ್ದ ಪ್ರಧಾನಿ, ಈಗ ಕ್ರಾಂತಿಕಾರಿ ಯೋಜನೆಯ ಕ್ರೆಡಿಟ್ ಪಡೆಯಲು ಮರುನಾಮಕರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಘಟನೆಯ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.
ಇದು ನಮ್ಮ ರಾಷ್ಟ್ರೀಯ ಮನಸ್ಸಿನಿಂದ ಮಹಾತ್ಮ ಗಾಂಧಿಯನ್ನು ವಿಶೇಷವಾಗಿ ಭಾರತದ ಆತ್ಮವು ವಾಸಿಸುವ ಹಳ್ಳಿಗಳಿಂದ ಅಳಿಸುವ ಇನ್ನೊಂದು ಮಾರ್ಗವಾಗಿದೆ. ಈ ಕ್ರಮವು ಕಾಗದದ ಬದಲಾವಣೆಯಲ್ಲದೆ ಬೇರೇನೂ ಅಲ್ಲ ಎಂದು ವೇಣುಗೋಪಾಲ್ ಟೀಕಾ ಪ್ರಹಾರ ನಡೆಸಿದ್ದಾರೆ.
ಮನ್ರೇಗಾ ಕಾರ್ಮಿಕರು ಹೆಚ್ಚಿನ ವೇತನಕ್ಕೆ ಒತ್ತಾಯಿಸುತ್ತಿದ್ದಾರೆ, ಆದರೆ ಕೇಂದ್ರವು ವರ್ಷದಿಂದ ವರ್ಷಕ್ಕೆ ಯೋಜನೆಗೆ ಮೀಸಲಿಟ್ಟ ಹಣವನ್ನು ಕಡಿಮೆ ಮಾಡುತ್ತಿದೆ. ರಾಶಿ ರಾಶಿ ಬಾಕಿಯಿದೆ. ಇದು ನಿಧಾನಗವಾಗಿ ಯೋಜನೆಯನ್ನು ಕಿತ್ತುಹಾಕಲು ಮಾಡಲಾಗುತ್ತಿರುವ ಹುನ್ನಾರವಾಗಿದೆ. ವಾಸ್ತವದಲ್ಲಿ ಈ ಸರ್ಕಾರ ಕಲ್ಯಾಣದ ಉದ್ದೇಶವನ್ನು ಹೊಂದಿಲ್ಲ. ಆಲೋಚನೆಗಳು ಖಾಲಿಯಾದಾಗ ಕೇವಲ ನೆಪವನ್ನು ಹಾಕುತ್ತಿದೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.
ಮಿಸ್ಟರ್ ಮೋದಿ, ನಿಮಗೆ ಬೇಕಾದುದನ್ನು ಮರುನಾಮಕರಣ ಮಾಡಿ, ಭಾರತದ ಪ್ರತಿಯೊಂದು ಹಳ್ಳಿಗೂ ಕ್ರಾಂತಿಕಾರಿ ಯೋಜನೆಯನ್ನು ತಂದವರು ಡಾ. ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಎಂದು ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, MGNREGA ಅಥವಾ ನರೇಗಾ ಎಂದು ಪ್ರಸಿದ್ಧವಾಗಿದೆ. ಇದು ಗ್ರಾಮೀಣ ಪ್ರದೇಶದ ಕುಟುಂಬಗಳ ಜೀವನ ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಪ್ರತಿ ಕುಟುಂಬಕ್ಕೆ ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಕೆಲಸ ಒದಗಿಸುವ ಯೋಜನೆಯಾಗಿದ್ದು, 2005 ರಲ್ಲಿ ಇದನ್ನು ಜಾರಿಗೆ ತರಲಾಯಿತು.
Advertisement