

ಪುಣೆ: ಪುಣೆ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ಸೋಮವಾರ ತರಗತಿಯೊಳಗೆ ಕ್ಲಾಸ್ಮೇಟ್ ಒಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದರಿಂದ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾಜಗುರುನಗರದ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ.
"ಸೋಮವಾರ ಬೆಳಗ್ಗೆ ಕೋಚಿಂಗ್ ಸೆಂಟರ್‌ನಲ್ಲಿ ಚಾಕು ಹಿಡಿದುಕೊಂಡು ಬಂದ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಇದ್ದಕ್ಕಿದ್ದಂತೆ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆತ ಸಾವನ್ನಪ್ಪಿದ್ದಾನೆ. ಆರೋಪಿ ಬಾಲಕನನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ" ಎಂದು ಖೇಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಹುಡುಗರ ನಡುವೆ ಏನೋ ಜಗಳವಿತ್ತು ಎಂದು ಅವರು ಹೇಳಿದ್ದಾರೆ.
"ದಾಳಿಯ ಹಿಂದಿನ ನಿಖರವಾದ ಕಾರಣದ ಬಗ್ಗೆ ನಾವು ತನಿಖೆ ಮಾಡುತ್ತಿದ್ದೇವೆ" ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement