ಗೋವಾ ಅಗ್ನಿ ದುರಂತ: ನೈಟ್‌ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರು ಭಾರತಕ್ಕೆ ಗಡೀಪಾರು

ಥಾಯ್ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಭಾರತೀಯ ರಾಯಭಾರ ಕಚೇರಿಯ ಮಧ್ಯ ಪ್ರವೇಶದ ನಂತರ ಡಿಸೆಂಬರ್ 11 ರಂದು ಫುಕೆಟ್‌ನಲ್ಲಿ ಥಾಯ್ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿದ್ದರು.
Goa nightclub fire
ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ
Updated on

ನವದೆಹಲಿ: ಡಿಸೆಂಬರ್ 6 ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಜನರನ್ನು ಬಲಿ ಪಡೆದ ಗೋವಾ ನೈಟ್‌ಕ್ಲಬ್‌ನ ಸಹ-ಮಾಲೀಕರಾದ ಗೌರವ್ ಲುತ್ರಾ ಮತ್ತು ಸೌರಭ್ ಲುತ್ರಾ ಅವರನ್ನು ಮಂಗಳವಾರ ಥೈಲ್ಯಾಂಡ್ ಅಧಿಕಾರಿಗಳು ಭಾರತಕ್ಕೆ ಗಡೀಪಾರು ಮಾಡಿದ್ದಾರೆ.

ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಮತ್ತು ನೈಟ್‌ಕ್ಲಬ್ ನಿರ್ವಹಣೆಯಲ್ಲಿ ಸುರಕ್ಷತಾ ನಿಯಮ ಉಲ್ಲಂಘನೆ ಮತ್ತು ಲೋಪಗಳ ಬಗ್ಗೆ ತನಿಖೆ ನಡೆಯುತ್ತಿರುವ ಮಧ್ಯೆ ಆರೋಪಿಗಳ ಗಡೀಪಾರು ಮಹತ್ವ ಪಡೆದುಕೊಂಡಿದೆ.

ಉತ್ತರ ಗೋವಾದ ಅರ್ಪೋರಾದಲ್ಲಿರುವ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್‌ಕ್ಲಬ್‌ನ ಸಹ-ಮಾಲೀಕರಾದ ಲುತ್ರಾ ಸಹೋದರರು, ಅಗ್ನಿ ಅವಘಡದ ನಂತರ ಥೈಲ್ಯಾಂಡ್‌ನ ಫುಕೆಟ್‌ಗೆ ಪರಾರಿಯಾಗಿದ್ದರು. ಅವರ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.

Goa nightclub fire
ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: 'ನಾನು ಕೇವಲ ಪಾರ್ಟನರ್' ಎಂದ ಬಂಧಿತ ಅಜಯ್ ಗುಪ್ತಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಯ್ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಭಾರತೀಯ ರಾಯಭಾರ ಕಚೇರಿಯ ಮಧ್ಯ ಪ್ರವೇಶದ ನಂತರ ಡಿಸೆಂಬರ್ 11 ರಂದು ಫುಕೆಟ್‌ನಲ್ಲಿ ಥಾಯ್ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ಗಡೀರಪಾರು ಮಾಡಲಾಗಿದ್ದು, ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುತ್ತಿದೆ.

ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಈಗಾಗಲೇ ಐವರು ವ್ಯವಸ್ಥಾಪಕರು ಮತ್ತು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com