

ನವದೆಹಲಿ: ಎನ್ ಸಿಪಿ(ಶರದ್ಚಂದ್ರ ಪವಾರ್) ಸಂಸದೆ ಸುಪ್ರಿಯಾ ಸುಳೆ ಅವರು ಕಾಂಗ್ರೆಸ್ ನ ಎಲೆಕ್ಟ್ರಾನಿಕ್ ಮತ ಯಂತ್ರ(ಇವಿಎಂ) ವಂಚನೆ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಇವೇ ಯಂತ್ರಗಳಿಂದಾಗಿ ನಾನು ನಾಲ್ಕು ಬಾರಿ ಗೆದ್ದಿದ್ದೇನೆ ಎಂದು ಹೇಳಿದ್ದಾರೆ.
"ನಾನು ಇದೇ ಯಂತ್ರದಲ್ಲಿ ಆಯ್ಕೆಯಾಗಿದ್ದೇನೆ. ಆದ್ದರಿಂದ ನಾನು ಇವಿಎಂಗಳು ಅಥವಾ ವಿವಿಪ್ಯಾಟ್‌ಗಳನ್ನು ಪ್ರಶ್ನಿಸುವುದಿಲ್ಲ. ನಾನು ಯಂತ್ರದ ವಿರುದ್ಧ ಮಾತನಾಡುತ್ತಿಲ್ಲ. ನಾನು ಬಹಳ ಸೀಮಿತ ವಿಷಯವನ್ನು ಹೇಳುತ್ತಿದ್ದೇನೆ ಮತ್ತು ಮಹಾರಾಷ್ಟ್ರದಲ್ಲಿ ಇಷ್ಟು ದೊಡ್ಡ ಜನಾದೇಶವನ್ನು ಪಡೆದ ಭಾರತೀಯ ಜನತಾ ಪಕ್ಷದಿಂದ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೇನೆ" ಎಂದು ಮಹಾರಾಷ್ಟ್ರದ ಬಾರಾಮತಿಯಿಂದ ನಾಲ್ಕು ಬಾರಿ ಸಂಸದೆಯಾಗಿರುವ ಸುಳೆ ಅವರು ಚುನಾವಣಾ ಸುಧಾರಣೆಗಳ ಕುರಿತ ಚರ್ಚೆಯ ಸಂದರ್ಭದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣದ ಮಿತ್ರ ಪಕ್ಷವಾಗಿರುವ ಎನ್ ಸಿಪಿ ನಾಯಕಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ವಂಚನೆಯ ಬಗ್ಗೆ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೆಲವು ದಿನಗಳ ನಂತರ ಈ ಹೇಳಿಕೆ ನೀಡಿದ್ದಾರೆ ಮತ್ತು ವಿರೋಧ ಪಕ್ಷಗಳು ಹಲವು ವರ್ಷಗಳಿಂದ ಈ ಆರೋಪವನ್ನು ಮಾಡುತ್ತಿವೆ.
ಇವಿಎಂಗಳನ್ನು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲು ಪರಿಚಯಿಸಿದರು ಮತ್ತು ಈಗ ಅವರ ಮಗ ಹಾಗೂ ಅವರ ಪಕ್ಷವೇ ಅವುಗಳನ್ನು ವಿರೋಧಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
Advertisement