ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ

ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025 ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.
Lok Sabha passes VB-G RAM G Bill amid Opposition uproar; adjourns for the day
ಲೋಕಸಭೆ
Updated on

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ನರೇಗಾ ಯೋಜನೆ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಜಿ ರಾಮ್ ಜಿ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕಾರಿಸಲಾಯಿತು.

20 ವರ್ಷಗಳಷ್ಟು ಹಳೆಯದಾದ ಎಂಜಿಎನ್‌ಆರ್‌ಇಜಿಎ ಬದಲಿಗೆ ಪ್ರತಿ ವರ್ಷ 125 ದಿನಗಳವರೆಗೆ ಗ್ರಾಮೀಣ ಉದ್ಯೋಗಗಳನ್ನು ಖಾತರಿಪಡಿಸುವ ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025 ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.

ಇಂದು ಮಸೂದೆ ಮೇಲಿನ ಚರ್ಚೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಉತ್ತರಿಸಿದ ನಂತರ ಜಿ ರಾಮ್ ಜಿ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ, "ಲೋಕಸಭೆಯು VB- G RAM G ಮಸೂದೆ ಅಂಗೀಕರಿಸಿದೆ" ಎಂದು ಸ್ಪೀಕರ್‌ ಓಂ ಬಿರ್ಲಾ ಘೋಷಿಸಿದರು.

Lok Sabha passes VB-G RAM G Bill amid Opposition uproar; adjourns for the day
MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ.40ರಷ್ಟು ಹೊರೆ! ವಿಶೇಷತೆ ಏನು?

ಇನ್ನು ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಪ್ರತಿಪಕ್ಷ ಸದಸ್ಯರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯವನ್ನು ಸ್ಪೀಕರ್‌ ಓಂ ಬಿರ್ಲಾ ತಿರಸ್ಕರಿಸಿದರು. "ಶಾಸನದ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದೆ" ಎಂದು ಘೋಷಿಸಿದರು.

ಪ್ರತಿಪಕ್ಷಗಳ ತೀವ್ರ ಗದ್ದಲದ ಪರಿಣಾಮವಾಗಿ, ಸ್ಪೀಕರ್‌ ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಿದರು. ಶುಕ್ರವಾರ ಚಳಿಗಾಲದ ಅಧಿವೇಶನದ ಕೊನೆಯ ದಿನ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com