Dattatreya Hosabale
ದತ್ತಾತ್ರೇಯ ಹೊಸಬಾಳೆ

ಭಾರತದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ: RSS ನಾಯಕ ದತ್ತಾತ್ರೇಯ ಹೊಸಬಾಳೆ

ಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗೆ ಹೇಳಿದ ಮಾತ್ರಕ್ಕೆ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ.
Published on

ನವದೆಹಲಿ: ಹಿಂದೂ ಧರ್ಮ ಶ್ರೇಷ್ಠವಾದದ್ದು. ಭಾರತ ನೆಲದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು ಎಂದು ಹಿರಿಯ ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗೆ ಹೇಳಿದ ಮಾತ್ರಕ್ಕೆ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ. ನಮ್ಮ ಹಿಂದೂ ಧರ್ಮ ಸರ್ವೋಚ್ಛ. ಅದು ಎಲ್ಲರ ಪರವಾಗಿದೆ ಎಂದು ಹೊಸಬಾಳೆ ತಿಳಿಸಿದ್ದಾರೆ.

ಯೋಗಾಸನಗಳ ಅನುಕ್ರಮವಾದ ಸೂರ್ಯ ನಮಸ್ಕಾರವು ವೈಜ್ಞಾನಿಕ ಮತ್ತು ಆರೋಗ್ಯ ಆಧಾರಿತ ಅಭ್ಯಾಸ. ಇದರಿಂದ ಮುಸ್ಲಿಮರಿಗೆ ಏನು ಹಾನಿ? ಪ್ರಾರ್ಥನೆ ಮಾಡುವವರು ಪ್ರಾಣಾಯಾಮ ಮಾಡಿದರೆ ತಪ್ಪೇ? ಸೂರ್ಯ ನಮಸ್ಕಾರ ಮಾಡೋದಕ್ಕೆ ನಮಾಜ್‌ ಬಿಡಿ ಅಂತ ನಾವು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾನವ ಧರ್ಮಕ್ಕೆ ಆದ್ಯತೆ ನೀಡುವ ಮೂಲಕ ಯಾವುದೇ ನಂಬಿಕೆಯನ್ನು ಅನುಸರಿಸಲು ಜನರು ಸ್ವತಂತ್ರರು. ಹಿಂದೂ ತತ್ವಶಾಸ್ತ್ರವು ಎಲ್ಲಾ ಜೀವಿಗಳು ಮತ್ತು ಪ್ರಕೃತಿ ವಿಚಾರವಾಗಿ ಅಹಿಂಸೆಯನ್ನು ಬೋಧಿಸುತ್ತದೆ ಎಂದು ತಿಳಿಸಿದ್ದಾರೆ.

 Dattatreya Hosabale
ನರೇಂದ್ರ ಮೋದಿ ನಂತರ ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿ ಯಾರು? RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com