ಮೊಟ್ಟೆ ತಿಂದ್ರೆ ಕ್ಯಾನ್ಸರ್‌ ಬರುತ್ತಾ? ಕಡೆಗೂ ದೃಢೀಕರಣ ನೀಡಿದ FSSAI

ಮೊಟ್ಟೆಗಳಲ್ಲಿ ನೈಟ್ರೋ ಫ್ಯೂರಾನ್ ಮೆಟಾಬಾಲೈಟ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವರದಿಗಳು ವಿಶೇಷವಾಗಿ 'ನಾನ್ ವೆಜ್' ಪ್ರಿಯರಲ್ಲಿ ನಿರಾಸೆ ಉಂಟು ಮಾಡಿತ್ತು.
Casual Images
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಇತ್ತೀಚಿಗೆ ಪೌಷ್ಟಿಕಾಂಶಯುಕ್ತ 'ಮೊಟ್ಟೆ' ತಿಂದ್ರೆ ಕ್ಯಾನ್ಸರ್‌ ಬರುತ್ತದೆ ಎಂಬ ವರದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ, ಜನರಲ್ಲಿ ಆತಂಕ ಹುಟ್ಟಿಸಿತ್ತು.

ಮೊಟ್ಟೆಗಳಲ್ಲಿ ನೈಟ್ರೋ ಫ್ಯೂರಾನ್ ಮೆಟಾಬಾಲೈಟ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವರದಿಗಳು ವಿಶೇಷವಾಗಿ 'ನಾನ್ ವೆಜ್' ಪ್ರಿಯರಲ್ಲಿ ತೀವ್ರ ಭಯಭೀತಿಯನ್ನು ಉಂಟು ಮಾಡಿತ್ತು. ಕೆಲವರು ಮೊಟ್ಟೆಯ ಬಳಕೆಯನ್ನೇ ಸಂಪೂರ್ಣವಾಗಿ ನಿಲ್ಲಿಸುವ ಯೋಚನೆ ನಡೆಸಿದರು.

ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಮೊಟ್ಟೆ, ಸೇವನೆಗೆ ಸುರಕ್ಷಿತವಾಗಿದ್ದು, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಶನಿವಾರ ಹೇಳಿದೆ.

ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ಅಂಶಗಳಿವೆ ಎನ್ನುವ ವರದಿಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ ಎಂದು FSSAI ತಿಳಿಸಿದೆ.

ಇಂತಹ ವರದಿಗಳು ಜನರನ್ನು ತಪ್ಪುದಾರಿಗೆ ಎಳೆಯುವುದಲ್ಲದೆ, ಅನಗತ್ಯವಾಗಿ ಆತಂಕವನ್ನು ಸೃಷ್ಟಿ ಮಾಡಿದೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಕಾರ, ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯ ಎಲ್ಲ ಹಂತದಲ್ಲಿ ನೈಟ್ರೋ ಫ್ಯೂರಾನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಯಾವುದೇ ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯು ಮೊಟ್ಟೆ ಸೇವನೆಯು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಹೇಳಿಲ್ಲ ಎಂದು FSSAI ಸ್ಪಷ್ಪಪಡಿಸಿದೆ.

Casual Images
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

2011 ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳ ಅಡಿಯಲ್ಲಿ ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಫ್ಯೂರಾನ್‌ಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು FSSAI ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com