ಹೌರಾ: ಮಧ್ಯರಾತ್ರಿ ಹೊತ್ತಿ ಉರಿದ ಮನೆ; ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಹೌರಾದ ಜಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ
Four of family charred to death in midnight fire in Bengal's Howrah village
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹೌರಾದ ಜಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ

ಮೃತರನ್ನು ದುರ್ಜೋಧನ್ ದೋಲುಯಿ(72), ಅವರ ಮಗ ದುಧ್‌ಕುಮಾರ್ ದೋಲುಯಿ(45), ಸೊಸೆ ಶಿಬಾನಿ ದೋಲುಯಿ(40) ಮತ್ತು ಮೊಮ್ಮಗಳು ಶಂಪಾ ದೋಲುಯಿ(15) ಎಂದು ಗುರುತಿಸಲಾಗಿದೆ.

Four of family charred to death in midnight fire in Bengal's Howrah village
40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Video

ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ನಾಲ್ವರ ಶವಗಳನ್ನು ಮನೆಯಿಂದ ಹೊರತೆಗೆದಿದ್ದಾರೆ.

ಅವರ ಹುಲ್ಲಿನ ಮನೆಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಆಗಮಿಸಿದ್ದು, ಸುಮಾರು ಒಂದು ಗಂಟೆಯ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

"ಮರಣೋತ್ತರ ಪರೀಕ್ಷೆಗಾಗಿ ಉಲುಬೇರಿಯಾದ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಟುಂಬವು ತುಂಬಾ ಬಡವರೆಂದು ಸ್ಥಳೀಯರು ತಿಳಿಸಿದ್ದಾರೆ. ದುಧ್‌ಕುಮಾರ್‌ಗೆ ರಾಜ್ಯದ ಹೊರಗೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುವ ಒಬ್ಬ ಮಗನೂ ಇದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com