

ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ವರ್ಷದ ಆರಂಭದಲ್ಲಿ ಮಾಜಿ ಟೆನಿಸ್ ಆಟಗಾರ್ತಿ ಮೋರ್ ಅವರನ್ನು ವಿವಾಹವಾದ ಚೋಪ್ರಾ, ಪ್ರಸ್ತುತ ಸ್ಪರ್ಧೆಯಿಂದ ವಿರಾಮ ತೆಗೆದುಕೊಂಡಿದ್ದಾರೆ.
ನೀರಜ್ ಚೋಪ್ರಾ ವಿವಾಹ ಸಮಾರಂಭದಲ್ಲಿ ಕೆಲವೇ ಕೆಲವು ಹತ್ತಿರ ಸಂಬಂಧಿಗಳು ಮತ್ತು ಕುಟುಂಬ ಸದಸ್ಯರು ಹಾಜರಿದ್ದರು. ಚೋಪ್ರಾ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದಾಗ ಜನರು ಅವರ ವಿವಾಹದ ಬಗ್ಗೆ ತಿಳಿದುಕೊಂಡಿದ್ದರು.
"ಇಂದು ಬೆಳಗ್ಗೆ ಲೋಕ ಕಲ್ಯಾಣ್ ಮಾರ್ಗ್‌ದಲ್ಲಿರುವ ತಮ್ಮ ನಿವಾಸಕ್ಕೆ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರು ಆಗಮಿಸಿದ್ದರು. ಈ ವೇಳೆ ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಉತ್ತಮ ಸಂವಾದ ನಡೆಸಿದೆವು!" ಎಂದು ಪ್ರಧಾನಿ ಮೋದಿ 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.
2021ರಲ್ಲಿ ಟೋಕಿಯೊದಲ್ಲಿ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು ಇತಿಹಾಸ ಸೃಷ್ಟಿಸಿದ್ದರು. ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೆಟಿಕ್ಸ್ ಎಂಬ ಗೌರವಕ್ಕೆ ನೀರಜ್ ಚೋಪ್ರಾ ಪಾತ್ರರಾಗಿದ್ದರು.
Advertisement