

ಬರೇಲಿ: ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂ ಧರ್ಮ ಮತ್ತು ಸಮಾಜವನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಬಜರಂಗದಳದ ಸದಸ್ಯರು ರಾಯ್ ಬರೇಲಿಯ ಸೇಂಟ್ ಅಲ್ಫೋನ್ಸ್ ಕ್ಯಾಥೆಡ್ರಲ್ ಚರ್ಚ್‌ನ ಹೊರಗೆ ಪ್ರತಿಭಟನೆ ನಡೆಸಿ ‘ಹನುಮಾನ್ ಚಾಲೀಸಾ’ ಪಠಿಸಿದರು.
ಚರ್ಚ್‌ನ ಮುಖ್ಯ ದ್ವಾರದ ಬಳಿ ಕುಳಿತ ಪ್ರತಿಭಟನಾಕಾರರು ಜೈ ಶ್ರೀ ರಾಮ್' ಮತ್ತು 'ಹರ್ ಹರ್ ಮಹಾದೇವ್' ಎಂದು ಘೋಷಣೆಗಳನ್ನು ಕೂಗಿದರು. ಕ್ರಿಸ್ಮಸ್ ಹಬ್ಬವು ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅವರು ಆರೋಪಿಸಿದರು.
ಅಲ್ಲದೇ, ಪ್ರತಿಭಟನೆಯ ಸಮಯದಲ್ಲಿ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ಧಾವಿಸಿದರು.
ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಜರಂಗದಳ ಕಾರ್ಯಕರ್ತರು ನಗರ ಸರ್ಕಲ್ ಇನ್ಸ್ ಪೆಕ್ಟರ್ ಅಶುತೋಷ್ ಶಿವಂ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
Advertisement