BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ

ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆ ಹೆಚ್ಚಳವಾಗಿದೆ. ಬಂಗಾಳ ಗಡಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಬಂಗಾಳಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ, ಈಗ ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ.
Union Home Minister Amit Shah addressing press in Kolkata.
ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದರು.Photo | X@BJP4India
Updated on

ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ "ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನುಸುಳುಕೋರರನ್ನು ಗುರುತಿಸುವುದಷ್ಟೇ ಅಲ್ಲದೆ, ಅವರನ್ನು ಓಡಿಸುವ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು.

ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆ ಹೆಚ್ಚಳವಾಗಿದೆ. ಬಂಗಾಳ ಗಡಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಬಂಗಾಳಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ, ಈಗ ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ. ನಾವು ದೇಶದ ಸಂಸ್ಕೃತಿಯನ್ನು ಉಳಿಸಬೇಕು. ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಾದರೆ, ಗಡಿಗಳನ್ನು ಮುಚ್ಚುವ ದೇಶಭಕ್ತಿಯ ಸರ್ಕಾರ ನಮಗೆ ಇಲ್ಲಿ ಬೇಕು. ಮಮತಾ ಬ್ಯಾನರ್ಜಿ ಇದನ್ನು ಮಾಡಲು ಸಾಧ್ಯವಿಲ್ಲ, ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.

"ಬಂಗಾಳದ ಜನರು ಒಳನುಸುಳುವಿಕೆಯಿಂದ ಆತಂಕಗೊಂಡಿದ್ದಾರೆ. ನಾವು ಒಳನುಸುಳುವವರನ್ನು ಗುರುತಿಸುವುದಲ್ಲದೆ ಅವರನ್ನು ಓಡಿಸುತ್ತೇವೆ. ಮಮತಾ ಬ್ಯಾನರ್ಜಿ ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ, "ಪಶ್ಚಿಮ ಬಂಗಾಳ ಸರ್ಕಾರ ನಮಗೆ ಭೂಮಿ ನೀಡದ ಕಾರಣ ನಾವು ಬಾಂಗ್ಲಾದೇಶ ಗಡಿಯ ಬೇಲಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು,

Union Home Minister Amit Shah addressing press in Kolkata.
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿ ವಿವಾದ: ಮಮತಾಗೆ ತಳಮಳ (ನೇರ ನೋಟ)

ಇದೇ ವೇಳೆ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಪಶ್ಚಿಮ ಬಂಗಾಳ ಆರ್ಥಿಕತೆಯಲ್ಲಿ "ಸಾಕಷ್ಟು ಕುಸಿತ"ವನ್ನು ಕಂಡಿದೆ. ದುರಾಡಳಿತೆದಿಂದಾಗಿ ಕೈಗಾರಿಕೆಗಳು ಇತರ ರಾಜ್ಯಗಳ ಪಾಲಾಗಿವೆ. ರಾಜ್ಯದಲ್ಲಿ ಭಯ ಮತ್ತು ಹಿಂಸಾಚಾರದ ರಾಜಕೀಯವನ್ನು ಸೃಷ್ಟಿಸುವಲ್ಲಿ ಟಿಎಂಸಿ ಎಡಪಕ್ಷಗಳನ್ನು ಮೀರಿಸಿದೆ, ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಕಳೆದುಹೋದ ವೈಭವವನ್ನು ಪುನಃಸ್ಥಾಪಿಸುತ್ತದೆ ಎಂದು ಪ್ರತಿಪಾದಿಸಿದರು.

ಏಪ್ರಿಲ್ 15, 2026 ರ ನಂತರ, ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ, ನಾವು ಬಂಗಾಳದ ಹೆಮ್ಮೆ, ಸಂಸ್ಕೃತಿ ಮತ್ತು ಪುನರುಜ್ಜೀವನದ ಪುನರುಜ್ಜೀವನವನ್ನು ಪ್ರಾರಂಭಿಸುತ್ತೇವೆಂದು ಭರವಸೆ ನೀಡಿದರು.

"ಸ್ವಾಮಿ ವಿವೇಕಾನಂದ, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ, ಗುರುದೇವ್ ರವೀಂದ್ರನಾಥ ಟ್ಯಾಗೋರ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ ಅವರು ಕಲ್ಪಿಸಿಕೊಂಡ ಬಂಗಾಳವನ್ನು ನಿರ್ಮಿಸಲು ನಾವು ಕೆಲಸ ಮಾಡುತ್ತೇವೆಂದು ಹೇಳಿದರು. ಇದೇ ವೇಳೆ 2026 ರ ವೇಳೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದೂ ಭವಿಷ್ಯ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com