

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪಾದಚಾರಿಗಳ ಮೇಲೆ ಬೆಸ್ಟ್ ಬಸ್ ಹರಿದಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ಭಾಂಡೂಪ್ (ಪಶ್ಚಿಮ) ಪ್ರದೇಶದ ಸ್ಟೇಶನ್ ರೋಡ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಬಸ್ ಇದ್ದಕ್ಕಿದ್ದಂತೆ ಹಿಂಬದಿಗೆ ಚಲಿಸಿದ್ದು, ಈ ವೇಳೆ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ, ಪೊಲೀಸರು, ಬೆಸ್ಟ್ ಬಸ್ ಸಿಬ್ಬಂದಿ ಮತ್ತು 108 ಆಂಬುಲೆನ್ಸ್‌ಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದೆ.
ಘಟನೆ ನಂತರ ಬಸ್ ಚಾಲಕನನ್ನು ಮುಂಬೈ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಅಪಘಾತಕ್ಕೆ ನಿಖರ ಕಾರಣ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಮುಲುಂಡ್‌ನ ಎಂಟಿ ಅಗರವಾಲ್ ಆಸ್ಪತ್ರೆಯಲ್ಲಿ ಮೂವರು ಮೃತರಾಗಿದ್ದು, ಇನ್ನೂ ಒಂಬತ್ತು ಮಂದಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement