2012 ಪುಣೆ ಬಾಂಬ್ ಸ್ಫೋಟ ಆರೋಪಿ 'ಅನಾಮಿಕ'ರ ಗುಂಡೇಟಿಗೆ ಬಲಿ!

ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ..
Pune blasts accused shot dead in Maharashtra town
ಪುಣೆ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಗುಂಡೇಟಿಗೆ ಬಲಿ
Updated on

ಪುಣೆ: 2012ರ ಪುಣೆ ಸ್ಫೋಟ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

2012ರ ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

50 ವರ್ಷದ ಜಹಗೀರ್ದಾರ್ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೊರಾವಕೆ ಕಾಲೇಜು ರಸ್ತೆಯಲ್ಲಿರುವ ಸ್ಮಶಾನದಿಂದ ದ್ವಿಚಕ್ರ ವಾಹನದಲ್ಲಿ ಬಂದ ಮತ್ತೊಬ್ಬ ವ್ಯಕ್ತಿಯೊಂದಿಗೆ ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮೇಲೆ ದಾಳಿ ಮಾಡಿದ್ದಾರೆ.

ಗುಂಡೇಟಿನಿಂದ ತೀವ್ರ ಗಾಯಗೊಂಡ ಜಹಗೀರ್ದಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಅವರು ಸಾವನ್ನಪ್ಪಿದ್ದರು. ದಾಳಿಯ ಹಿಂದಿನ ಉದ್ದೇಶ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆಗಾಗಿ ಬಹು ತಂಡಗಳನ್ನು ರಚಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಅಹಲ್ಯಾನಗರ ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.

Pune blasts accused shot dead in Maharashtra town
Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

ಪುಣೆ ಸ್ಫೋಟ ಆರೋಪಿ

ಜಂಗ್ಲಿ ಮಹಾರಾಜ್ ರಸ್ತೆ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜಹಗೀರ್ದಾರ್ ಅವರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತ್ತು.

ಆಗಸ್ಟ್ 1, 2012 ರಂದು ಪುಣೆಯ ಹೃದಯಭಾಗದಲ್ಲಿರುವ ಜನನಿಬಿಡ ರಸ್ತೆ, ಬಾಲಗಂಧರ್ವ ಥಿಯೇಟರ್ ಬಳಿ, ದೇನಾ ಬ್ಯಾಂಕ್ ಶಾಖೆ, ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್ ಮತ್ತು ಗರ್ವಾರೆ ಸೇತುವೆ ಬಳಿ ನಾಲ್ಕು ಸಂಘಟಿತ ಕಡಿಮೆ ತೀವ್ರತೆಯ ಸ್ಫೋಟಗಳು ಸಂಭವಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com