

ನವದೆಹಲಿ: ರಾಜಸ್ಥಾನದ ಕೋಟಾ ಹಾಗೂ ಮಧ್ಯಪ್ರದೇಶದ ಉಜ್ಜೈನ್ ಜಿಲ್ಲೆಯ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಚಲಿಸಿದ ವಿಡಿಯೊವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆಯಿದು. ಗಾಳಿಯ ವೇಗದಲ್ಲಿ ಚಲಿಸುವ ರೈಲಿನಲ್ಲಿ ಕುಳಿತು, ಕೈಯಲ್ಲಿರುವ ನೀರಿನ ಗ್ಲಾಸ್ ಅಲುಗಾಡದಂತೆ ರೈಲು ಚಲಿಸಿದೆ.
ವಂದೇ ಭಾರತ್ ಸ್ಲೀಪರ್ ರೈಲಿನ 'ವಾಟರ್ ಟೆಸ್ಟ್' ಯಶಸ್ವಿಯಾಗಿದ್ದು, ಇಡೀ ಜಗತ್ತು ಭಾರತದ ತಂತ್ರಜ್ಞಾನದತ್ತ ತಿರುಗಿ ನೋಡುವಂತೆ ಮಾಡಿದೆ.ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋವೊಂದು ಮಿಂಚಿನಂತೆ ವೈರಲ್ ಆಗುತ್ತಿದೆ.
ರೈಲು ಗಂಟೆಗೆ 180 ಕಿಲೋಮೀಟರ್ ವೇಗವನ್ನು ದಾಟುತ್ತಿದ್ದರೂ, ಒಳಗಿದ್ದ ನೀರಿನ ಗ್ಲಾಸ್‌ನಲ್ಲಿ ಯಾವುದೇ ಕಂಪನವಿರಲಿಲ್ಲ. ಒಂದು ಹನಿ ನೀರೂ ಕೆಳಗೆ ಬೀಳದೆ, ರೈಲಿನ ಅಸಾಧಾರಣ ಸ್ಥಿರತೆ ಮತ್ತು ಸಮತೋಲನವನ್ನು ಈ ಪರೀಕ್ಷೆ ಸಾಬೀತುಪಡಿಸಿದೆ.
ವಂದೇ ಭಾರತ್ ಸ್ಲೀಪರ್ ರೈಲುಗಳು ಶೀಘ್ರದಲ್ಲೇ ಎಸಿ ದರ್ಜೆಯ ಪ್ರಯಾಣಿಕರಿಗಾಗಿ ಕಾರ್ಯಾಚರಣೆಗೆ ಸಿದ್ಧವಾಗಲಿವೆ. ಇದು ದೀರ್ಘ ಪ್ರಯಾಣದ ಸಮಯವನ್ನು ಇನ್ನಷ್ಟು ಅನುಕೂಲಕರವಾಗಿಸುತ್ತದೆ’ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ ರೈಲ್ವೆ ಸುರಕ್ಷತಾ ಆಯುಕ್ತರ ಕಣ್ಗಾವಲಿನಲ್ಲಿ ನಡೆದ ಈ ಪರೀಕ್ಷಾರ್ಥ ಓಟವು ಕೋಟಾ-ನಾಗ್ಡಾ ರೈಲ್ವೆ ವಿಭಾಗದಲ್ಲಿ ಸಂಚಲನ ಮೂಡಿಸಿದೆ. ಗಂಟೆಗೆ 180 ಕಿ.ಮೀ ವೇಗದಲ್ಲಿ ಈ 'ಮೇಡ್ ಇನ್ ಇಂಡಿಯಾ' ಸ್ಲೀಪರ್ ರೈಲು ಓಡಿ ತನ್ನ ಸಾಮರ್ಥ್ಯವನ್ನು ತೋರಿಸಿದೆ.
Advertisement