
ನವದೆಹಲಿ: ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2025-26ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ.
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ಕೇಂದ್ರ ಬಜೆಟ್ ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಪಡೆದಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಸಂಸತ್ತಿನಲ್ಲಿ ಇಂದು (ಶನಿವಾರ) ಬೆಳಿಗ್ಗೆ 11ಕ್ಕೆ ಮಂಡನೆ ಆರಂಭವಾಗಲಿದೆ.
Advertisement