
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು "ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ" ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ ಮತ್ತು ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಮತ್ತು ಅದರ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಮಾವೋವಾದಿಗಳ 'ಪಶ್ಚಿಮ ಬಸ್ತಾರ್ ವಿಭಾಗ'ದ ಕೇಡರ್‌ಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶುಕ್ರವಾರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.
Advertisement