Union Budget 2025: ಹೋಂಸ್ಟೇಗಳಿಗೆ ಮುದ್ರಾ ಸಾಲ; ರಾಜ್ಯಗಳ ಸಹಭಾಗಿತ್ವದಲ್ಲಿ 50 ಪ್ರವಾಸಿ ತಾಣಗಳ ಅಭಿವೃದ್ಧಿ

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳ ಭಾಗವಾಗಿ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಟಾಪ್ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿದೆ ಮತ್ತು ಹೋಂಸ್ಟೇಗಳಿಗೆ ಮುದ್ರಾ ಸಾಲವನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳ ಭಾಗವಾಗಿ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಭಗವಾನ್ ಬುದ್ಧನ ಜೀವನ ಮತ್ತು ಬೋಧನೆಗಳಿಗೆ ಮಹತ್ವವಾದ ಸ್ಥಳಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ವಿಶೇಷ ಗಮನ ನೀಡುತ್ತದೆ ಎಂದು ಹೇಳಿದರು.

2025-26ರ ಬಜೆಟ್ ಅನ್ನು ಮಂಡಿಸಿದ ಸಚಿವೆ, ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು. ಇದರಿಂದ ಬಿಹಾರದ ಮಿಥಿಲಾಂಚಲ್ ಪ್ರದೇಶದಲ್ಲಿ 50,000 ಹೆಕ್ಟೇರ್‌ಗೆ ಲಾಭವಾಗಲಿದೆ ಎಂದು ಹೇಳಿದರು.

ನಿರ್ಮಲಾ ಸೀತಾರಾಮನ್
Union Budget 2025: 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿ ಬಲದೊಂದಿಗೆ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ಭಾರತೀಯ ಅಂಚೆ- ನಿರ್ಮಲಾ ಸೀತಾರಾಮನ್

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com