
ನವದೆಹಲಿ: 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಭಾರತೀಯ ಅಂಚೆಯನ್ನು ದೊಡ್ಡ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಪ್ರಕಟಿಸಿದ್ದಾರೆ.
ತಮ್ಮ ಎಂಟನೇ ಬಜೆಟ್ ಅನ್ನು ಮಂಡಿಸುತ್ತಿರುವ ಸೀತಾರಾಮನ್, ಗ್ರಾಮೀಣ ಭಾಗದ ಆರ್ಥಿಕತೆಗೆ ವೇಗವರ್ಧಕವಾಗಲು 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳೊಂದಿಗೆ ಭಾರತೀಯ ಅಂಚೆಯನ್ನು ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು.
ಅಸ್ಸಾಂನಲ್ಲಿ 12.7 ಲಕ್ಷ ಟನ್ ಸಾಮರ್ಥ್ಯದ ಯೂರಿಯಾ ಸ್ಥಾವರವನ್ನು ಸ್ಥಾಪಿಸಲಾಗುತ್ತದೆ. ಹೂಡಿಕೆ ಮತ್ತು ವಹಿವಾಟು ಮಿತಿಯನ್ನು ಹೆಚ್ಚಿಸುವುದಾಗಿ ಅವರು ಘೋಷಿಸಿದರು.
ಗುಣಮಟ್ಟದ ಉತ್ಪನ್ನಗಳೊಂದಿಗೆ, MSME ಗಳು (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ನಮ್ಮ ರಫ್ತಿನ ಶೇ 45 ರಷ್ಟು ಭಾಗವನ್ನು ಹೊಂದಿವೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು ಸರ್ಕಾರವು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.
ಗ್ರಾಮೀಣ ಭಾಗದ ಆರ್ಥಿಕತೆಯ ಸುಧಾರಣೆಗಾಗಿ ಸಾಲ ನೀಡುವ ಕಾರ್ಯಾಚರಣೆಗಳಿಗಾಗಿ ಕೇಂದ್ರವು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದರು.
Advertisement