Union Budget 2025: ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ; 1.5 ಲಕ್ಷ ಕೋಟಿ ರೂ ಹಂಚಿಕೆ

ಹೊಸ ಯೋಜನೆಗಳಲ್ಲಿ ಹೂಡಿಕೆ ಮಾಡಲು 10 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸಲು 2025-30 ಅವಧಿಗೆ asset monetisation plan ಅನ್ನು ಪ್ರಾರಂಭಿಸಲಾಗುವುದು.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯಗಳಿಗೆ 50 ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಅದಕ್ಕಾಗಿ 1.5 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

ಅಲ್ಲದೆ, ಹೊಸ ಯೋಜನೆಗಳಲ್ಲಿ ಹೂಡಿಕೆ ಮಾಡಲು 10 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸಲು 2025-30 ಅವಧಿಗೆ asset monetisation plan (ಸರ್ಕಾರ ತನ್ನ ಸ್ವತ್ತುಗಳನ್ನು ಆದಾಯವನ್ನು ತರುವ ಅವಕಾಶಗಳಾಗಿ ಪರಿವರ್ತಿಸುತ್ತದೆ) ಅನ್ನು ಪ್ರಾರಂಭಿಸಲಾಗುವುದು ಎಂದರು.

2025-26ರ ಬಜೆಟ್ ಅನ್ನು ಮಂಡಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕಲಿಕೆಯ ಅನುಭವಗಳು ಮತ್ತು ನವೀನ ತಂತ್ರಜ್ಞಾನದ ಮೂಲಕ ಶೈಕ್ಷಣಿಕ ಫಲಿತಾಂಶಗಳನ್ನು ಸುಧಾರಿಸಲೆಂದು ಕೃತಕ ಬುದ್ಧಿಮತ್ತೆಯನ್ನು (artificial intelligence) ಆಧರಿಸಿದ centre of excellence ಅನ್ನು ಸ್ಥಾಪಿಸಲು 500 ಕೋಟಿ ರೂ. ಮೀಸಲಿಡುವುದಾಗಿ ಘೋಷಿಸಿದರು.

ಇದಲ್ಲದೆ, ಎಲ್ಲ ಮನೆಗಳಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿರುವ ಜಲ ಜೀವನ್ ಮಿಷನ್‌ ಅಡಿಯಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸಲು ಬಜೆಟ್ ವೆಚ್ಚವನ್ನು ಹೆಚ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

ಆಡಳಿತ, ನಗರ ಭೂಮಿ ಮತ್ತು ಯೋಜನೆಗೆ ಸಂಬಂಧಿಸಿದ ನಗರ ವಲಯದ ಸುಧಾರಣೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಸೀತಾರಾಮನ್ ಹೇಳಿದರು.

ನಿರ್ಮಲಾ ಸೀತಾರಾಮನ್
Union Budget 2025: ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com