
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ, ಪ್ರಧಾನಮಂತ್ರಿಗಳ ವಿಕಸಿತ ಭಾರತ ಕನಸು ಸಾಕಾರ ಮಾಡುವ ಬಜೆಟ್ ಎಂದು ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಬಣ್ಣಸಿದ್ದಾರೆ.
ಕೇಂದ್ರದ ಜಲಶಕ್ತಿ ಇಲಾಖೆಯಡಿಯಲ್ಲಿ ‘ಜಲ್ ಜೀವನ್ ಮಿಷನ್ ಯೋಜನೆಯನ್ನು 2019ರಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳು ಜಾರಿಗೆ ತಂದಿದ್ದು, ಈವರೆಗೆ 19.36 ಕೋಟಿ ಮನೆಗಳಿಗೆ ಕೊಳವೆ ಮೂಲಕ ಶುದ್ದ ಕುಡಿಯುವ ನೀರನ್ನು ಕಲ್ಪಿಸಲಾಗಿದೆ. 2028ರವರೆಗೆ ಶೇ. 100 ರಷ್ಟು ಗುರಿ ಸಾಧಿಸುವ ಗುರಿಯನ್ನು ಹೊಂದಲಾಗಿದ್ದು, ಯೋಜನೆ ಅವಧಿಯನ್ನು 2028ರವರೆಗೆ ವಿಸ್ತರಿಸಲಾಗಿದೆ. ಇದಕ್ಕೆ ಬೇಕಾದ ಅವಶ್ಯಕ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
ರೇಲ್ವೆ ಇಲಾಖೆಗೆ ರೂ2.65ಲಕ್ಷ ಕೋಟಿ ಅನುದಾನ: ರೈಲ್ವೆ ಇಲಾಖೆಗೆ ಕಳೆದ ಸಾಲಿನಲ್ಲಿ ರೂ2.65ಲಕ್ಷ ಕೋಟಿ ಅನುದಾನ ನೀಡಲಾಗಿತ್ತು. ಈ ಬಜೆಟ್‌ನಲ್ಲಿಯೂ ಸಹ ರೂ. 2.65 ಲಕ್ಷ ಕೋಟಿ ನೀಡಲಾಗಿದೆ. ಈ ಪೈಕಿ ಪ್ರಯಾಣಿಕರ ಸವಲತ್ತುಗಳಿಗಾಗಿರೂ. 12 ಸಾವಿರ ಕೋಟಿ, ಸುರಕ್ಷತೆ ವ್ಯವಸ್ಥೆಗಳಿಗಾಗಿ ರೂ.1,16,500 ಕೋಟಿ ಮೀಸಲಿಡಲಾಗಿದೆ. ಕಳೆದ ವರ್ಷ : ರೂ.1,14,000 ಕೋಟಿ ಮೀಸಲಿಡಲಾಗಿತ್ತು.
ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅನುದಾನ: ಕಳೆದ ಬಾರಿ ಕರ್ನಾಟಕಕ್ಕೆ ರೇಲ್ವೆ ಬಜೆಟ್ ರೂ.7,559 ಕೋಟಿ ಇತ್ತು, ಈ ಬಾರಿ ಕರ್ನಾಟಕಕ್ಕೆ ರೇಲ್ವೆ ಬಜೆಟ್ ನಲ್ಲಿ ರೂ.7564 ಕೋಟಿ ನೀಡಲಾಗಿದೆ. ಸಬ್ ಅರ್ಬನ್ ರೇಲ್ವೆಗೆ ಕಳೆದ ಬಾರಿ 350 ಕೋಟಿ ನೀಡಲಾಗಿದೆ. ಈ ಬಜೆಟ್ ನಲ್ಲಿಯೂ ಸಹ ರೂ. 350 ಕೋಟಿ ನೀಡಲಾಗಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.
ರೇಲ್ವೆ ಸುರಕ್ಷತೆಗೆ ಕವಚ್ 4.0 ಯೋಜನೆ ಜಾರಿಗೊಳಿಸಿದೆ. ಈ ಬಗ್ಗೆ ಪ್ರಯೋಗ ನೆಡಸಲಾಗಿದೆ. ಕವಚ್ ದೇಶಿಯ ತಂತ್ರಜ್ಷಾನ ಆಧಾರಿತವಾಗಿದೆ ಮತ್ತು ಪರೀಕ್ಷೆ ಯಶಸ್ವಿಯಾಗಿದೆ. ಸುಮಾರು 10,000 ರೇಲ್ವೆ ಇಂಜಿನಗಳಿಗೆ ಕವಚ್ ಅಳವಡಿಸಲಾಗುವುದು. ಈ ಕಾರ್ಯ ಪ್ರಗತಿಯಲ್ಲಿದೆ. ನವದೆಹಲಿ - ಮುಂಬೈ ಮತ್ತು ನವದೆಹಲಿ-ಕಲ್ಕತ್ತಾ ಮಾರ್ಗದಲ್ಲಿ ಡಿಸೆಂಬರ್ ೨೦೨೫ರಲ್ಲಿ ಕವಚ್ ಅಳವಡಿಕೆ ಮುಗಿಯಲಿದೆ ಎಂದು ಅವರು ತಿಳಿಸಿದರು.
2025 ಭಾರತೀಯ ರೇಲ್ವೆಯ ವಿದ್ಯುದೀಕರಣ ಶತಮಾನೋತ್ಸವ ವರ್ಷವೆಂದು ಬಣ್ಣಿಸಿ, ಶೇ. 100 ರಷ್ಟು ವಿದ್ಯುದೀಕರಣ ಮುಗಿಸಲಾಗುವುದು. 2025-26ರಲ್ಲಿ non ac ಅಮೃತ್ ಭಾರತ್ ರೈಲು ಪ್ರಾರಂಭಿಸಲಾಗುವುದು, ಪ್ರಾರಂಭದಲ್ಲಿ 100 ಅಮೃತ್ ಭಾರತ್ ರೇಲ್ವೆ ತಯಾರಿಸಲಾಗುತ್ತಿದೆ. ಅಹ್ಲಾದಕರ ಪ್ರಯಾಣ ವ್ಯವಸ್ಥೆ ಅಮೃತ್ ಭಾರತ್ ರೇಲ್ವೆಯಲ್ಲಿ ದೊರಕಲಿದೆ ಎಂದು ಅವರು ಹೇಳಿದ್ದಾರೆ.
ಮುಂದಿನ 4 ವರ್ಷಗಳಲ್ಲಿ 1300ಕ್ಕೂ ಹೆಚ್ಚು ರೇಲ್ವೆ ನಿಲ್ದಾಣಗಳನ್ನು ಅಭವೃದ್ದಿ ಪಡಿಸಲಾಗುವುದು. ವಂದೇ ಸ್ಲೀಪರ್ ಕೋಚ್ ಪರೀಕಾರ್ಥವಾಗಿ ಚಲನೆಯಲ್ಲಿದೆ. 50 ವಂದೇ ಭಾರತ್ ಸ್ಲೀಪರ್ ಟ್ರೇನ್2025-26ಮತ್ತು 2026-27ರಲ್ಲಿ ಸಿದ್ದಪಡಿಸಿ ಲೋಕಾರ್ಪಣೆಗೊಳಿಸಲಾಗುವುದು. ಇವು ದೂರದ ಪ್ರಯಾಣಕ್ಕೆ ಅನುಕೂಲವಾಗಲಿದೆಯೆಂದು ಎಂದು ಅವರು ಮಾಹಿತಿ ನೀಡಿದ್ದಾರೆ.
Advertisement