ಬಿಹಾರ: ಕಾಂಗ್ರೆಸ್ ನಾಯಕ ಡಾ. ಶಕೀಲ್ ಅಹ್ಮದ್ ಖಾನ್ ಪುತ್ರನ ಶವ ಪತ್ತೆ!

ಬಿಹಾರದ ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಅವರ 18 ವರ್ಷದ ಪುತ್ರ ಅಯಾನ್ ಖಾನ್ ಅವರು ಸೋಮವಾರ ಪಾಟ್ನಾದ ತಮ್ಮ ಸರ್ಕಾರಿ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Shakeel Ahmad Khan
ಶಕೀಲ್ ಅಹ್ಮದ್ ಖಾನ್
Updated on

ಪಾಟ್ನಾ: ಕಾಂಗ್ರೆಸ್ ನಾಯಕ ಡಾ.ಶಕೀಲ್ ಅಹ್ಮದ್ ಖಾನ್ ಅವರ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿರುವುದಾಗಿ ಎಎನ್ ಐ ವರದಿ ಮಾಡಿದೆ. ಡಾ. ಶಕೀಲ್ ಅಹ್ಮದ್ ಖಾನ್ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ.

ಬಿಹಾರದ ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಅವರ 18 ವರ್ಷದ ಪುತ್ರ ಅಯಾನ್ ಖಾನ್ ಅವರು ಸೋಮವಾರ ಪಾಟ್ನಾದ ತಮ್ಮ ಸರ್ಕಾರಿ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ಶಕೀಲ್ ಅಹ್ಮದ್ ಖಾನ್ ಮನೆಯಲ್ಲಿ ಇಲ್ಲದಿರುವುದಾಗಿ ನೇಣು ಬಿಗಿದುಕೊಂಡು ಅಯಾನ್ ಸಾವನ್ನಪ್ಪಿದ್ದಾರೆ. ಆದರೆ, ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದುಬಂದಿಲ್ಲ.

Shakeel Ahmad Khan
ಬೆಂಗಳೂರು: ಪೋಷಕರು ಬೈಯ್ದಿದ್ದಕ್ಕೆ ಮನನೊಂದು10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಡ್ವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಶಕೀಲ್ ಅಹ್ಮದ್ ಖಾನ್ ಅವರು ಪಶ್ಚಿಮ ಬಂಗಾಳದ ಪಕ್ಷದ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com